ನೀರಿನ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಿ

| Published : Mar 27 2025, 01:09 AM IST

ನೀರಿನ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಸಿಂದಗಿ ಬೆಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಿಂದಗಿ ಮತ್ತು ಆಲಮೇಲ ತಾಲೂಕಿನ ಆಯಾ ಗ್ರಾಮ ಪಂಚಾಯತಿ ಪಿಡಿಒ, ಮೇಲಾಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಸಿಂದಗಿ

ಬೆಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಿಂದಗಿ ಮತ್ತು ಆಲಮೇಲ ತಾಲೂಕಿನ ಆಯಾ ಗ್ರಾಮ ಪಂಚಾಯತಿ ಪಿಡಿಒ, ಮೇಲಾಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಪಂಚಾಯತಿ ಸಭಾಭವನದಲ್ಲಿ ಕುಡಿಯುವ ನೀರಿನ ಕುರಿತು ಸಿಂದಗಿ ಮತ್ತು ಆಲಮೇಲ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗೃತ ಕ್ರಮ ಕೈಕೊಳ್ಳಬೇಕು. ಜೂನ್ ತಿಂಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು. ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಪ್ರಾಮಾಣಿಕ ಕೆಲಸ ಮಾಡಬೇಕು. ಒಂದು ವೇಳೆ ಕರ್ತವ್ಯಕ್ಕೆ ಲೋಪ ಎಸಗಿದರೇ ಅವರ ಮೇಲೆ ಶಿಸ್ತು ಕ್ರಮ ಕೈಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಯಾವ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಮತ್ತು ಮುಂಬರುವ ಬೆಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತದೆ ಎಂಬುದರ ಬಗ್ಗೆ ಮಾಹಿತಿ ನೀಡಿ. ಎಲ್ಲಿ ಕೊಳವೆ ಬಾವಿ ಕೊರೆಸುವ ಅವಶ್ಯಕತೆಯಿದೆ ಅದರ ಬಗ್ಗೆ ಪಟ್ಟಿ ತಯಾರಿಸಿ ನನಗೆ ನೀಡಿ. ಈ ಕುರಿತು ಜಿಲ್ಲಾ ಪಂಚಾಯತಿ ಸಿಇಒ ಜೊತೆ ಮಾತನಾಡುತ್ತೇನೆ ಎಂದು ಪಿಡಿಒಗಳಿಗೆ ಸೂಚನೆ ನೀಡಿದರು.ತಾಪಂ ಇಒ ರಾಮು ಅಗ್ನಿ, ಆಲಮೇಲ ತಾಪಂ ಇಒ ಪಠಾಣ, ತಹಸೀಲ್ದಾರ್‌ ಡಾ.ಪ್ರದೀಪಕುಮಾರ ಹಿರೇಮಠ, ಆಲಮೇಲ ತಹಸೀಲ್ದಾರ್‌ ವಿಜಯಕುಮಾರ.ಕೆ, ಸಿಂದಗಿ ಗ್ರೇಡ್ -2 ತಹಸೀಲ್ದಾರ್‌ ಇಂದ್ರಾಬಾಯಿ ಬಳಗಾನೂರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ತಾರಾನಾಥ ರಾಠೋಡ, ಕೆಡಿಪಿ ಸದಸ್ಯರಾದ ಮಹಾನಂದಾ ಬಮ್ಮಣ್ಣಿ, ಜಿಪಂ ಕೆಡಿಪಿ ಸದಸ್ಯ ನೂರಹ್ಮದ ಅತ್ತಾರ ಸೇರಿದಂತೆ ಪಿಡಿಒ ಹಾಗೂ ತಾಪಂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿನ ಸಮಸ್ಯೆಗಳ ಕುರಿತು ಚರ್ಚಿಸಿದರು.