ಚನ್ನರಾಯಪಟ್ಟಣ ಪುರಸಭೆಯನ್ನು ನಗರಸಭೆಯಾಗಿಸಿ

| Published : Jul 02 2025, 12:24 AM IST

ಸಾರಾಂಶ

ಚನ್ನರಾಯಪಟ್ಟಣ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂಬ ಪ್ರಸ್ತಾವನೆ ಹಿನ್ನೆಲೆಯಲ್ಲಿ ತಾಲೂಕಿನ ೧೨ ಗ್ರಾಮಗಳನ್ನು ಸೇರಿಸುವ ಕಡತಕ್ಕೆ ಅನುಮೋದನೆ ನೀಡಬೇಕೆಂದು ಶಾಸಕ ಸಿ.ಎನ್. ಬಾಲಕೃಷ್ಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಮಾಡಿದರು. ಪಟ್ಟಣವು ವಾಣಿಜ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರವಾಗಿ ಬೆಳೆಯುತ್ತಿದೆ. ಈಗಾಗಲೇ ಪುರಸಭೆ ಅಸ್ತಿತ್ವದಲ್ಲಿದ್ದು, ಜನಸಂಖ್ಯೆ ಆಧಾರದಲ್ಲಿ ನಗರಸಭೆಯನ್ನಾಗಿ ಪರಿವರ್ತಿಸಿ ವಿಶೇಷ ಅನುದಾನ ನೀಡುವ ಮೂಲಕ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಚನ್ನರಾಯಪಟ್ಟಣ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂಬ ಪ್ರಸ್ತಾವನೆ ಹಿನ್ನೆಲೆಯಲ್ಲಿ ತಾಲೂಕಿನ ೧೨ ಗ್ರಾಮಗಳನ್ನು ಸೇರಿಸುವ ಕಡತಕ್ಕೆ ಅನುಮೋದನೆ ನೀಡಬೇಕೆಂದು ಶಾಸಕ ಸಿ.ಎನ್. ಬಾಲಕೃಷ್ಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಮಾಡಿದರು. ಬೆಂಗಳೂರಿನ ಗೃಹ ಕಚೇರಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಶಾಸಕ ಬಾಲಕೃಷ್ಣ ಭೇಟಿ ಮಾಡಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು. ಪಟ್ಟಣವು ವಾಣಿಜ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರವಾಗಿ ಬೆಳೆಯುತ್ತಿದೆ. ಈಗಾಗಲೇ ಪುರಸಭೆ ಅಸ್ತಿತ್ವದಲ್ಲಿದ್ದು, ಜನಸಂಖ್ಯೆ ಆಧಾರದಲ್ಲಿ ನಗರಸಭೆಯನ್ನಾಗಿ ಪರಿವರ್ತಿಸಿ ವಿಶೇಷ ಅನುದಾನ ನೀಡುವ ಮೂಲಕ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗೆ ತಾಲೂಕಿನ ಮಾರೇನಹಳ್ಳಿ, ನಾಗಸಮುದ್ರ, ಡಿ.ಕಾಳೆನಹಳ್ಳಿ, ಗುಂಡಶೆಟ್ಟಿಹಳ್ಳಿ, ಗದ್ದೆಬಿಂಡೇನಹಳ್ಳಿ, ಜನಿವಾರ, ಹೊಸೂರು, ಕಗ್ಗಲೀಕಾವಲು, ಶೆಟ್ಟಿಹಳ್ಳಿ, ಚಾಮಡಿಹಳ್ಳಿ, ಕೆರೆಚಿಕ್ಕೇನಹಳ್ಳಿ ಮತ್ತು ಬೆಲಸಿಂದ ಗ್ರಾಮವನ್ನು ಸೇರಿಸುವ ಕಡತಕ್ಕೆ ಅನುಮೋದನೆ ನೀಡಬೇಕೆಂದು ಮನವಿ ಸಲ್ಲಿಸಿದರು.

ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು, ಕಡತ ಅನುಮೋದನೆ ಮಾಡಿಕೊಡುವ ಭರವಸೆ ನೀಡಿದರು.