ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಯ ಅರಿವು ಮೂಡಿಸಿ

| Published : Sep 03 2025, 01:00 AM IST

ಸಾರಾಂಶ

ಮನೆಯಲ್ಲಿ ಬಾಲ್ಯ ವಿವಾಹ ಮಾಡಲು ಪ್ರಯತ್ನಿಸಿದರೆ ಸಹಾಯವಾಣಿ ೧೦೯೮ ಉಚಿತ ಕರೆ ಮಾಡಿ, ಬಾಲ್ಯ ವಿವಾಹ ಮಾಡುವವರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ೨ ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅವಕಾಶವಿದೆ. ೧೮ ವರ್ಷದ ಒಳಗಿನ ಮಕ್ಕಳು ಮೋಟಾರು ವಾಹನಗಳನ್ನು ಚಲಾಯಿಸುತ್ತಿದ್ದು, ಅದು ಕಾನೂನಡಿ ಅಪರಾಧ.

ಕನ್ನಡಪ್ರಭ ವಾರ್ತೆ ಕೋಲಾರಮಕ್ಕಳು ತಮ್ಮ ತಂದೆ ತಾಯಿಯವರಿಗೆ ಗೌರವ ನೀಡುವುದು ಕಡಿಮೆ ಆಗಿದೆ. ಮಕ್ಕಳು ಸಂಸ್ಕಾರ ಮತ್ತು ಸಂಸ್ಕೃತಿ ಕಲಿಯುವುದು ಬಹಳ ಅವಶ್ಯ. ಮಕ್ಕಳು ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ನೀಡಿ ತಮ್ಮ ವಿದ್ಯಾಭ್ಯಾಸ ಉತ್ತಮವಾಗಿ ಮುಂದುವರಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಟೇಶ.ಆರ್ ಮಕ್ಕಳಿಗೆ ಕಿವಿಮಾತು ಹೇಳಿದರು.ತಾಲೂಕಿನ ಅಣ್ಣೀಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚೆಗೆ ಶಿಕ್ಷಣದೊಂದಿಗೆ ಸಂಸ್ಕಾರ ಹಾಗೂ ಸಂಸ್ಕೃತಿ ಕಲಿಸಿದರೆ ಮಕ್ಕಳ ಬದುಕು ಉಜ್ವಲವಾಗುತ್ತದೆ, ಬಾಲ್ಯ ವಿವಾಹಗಳು ಹೆಚ್ಚುಗುತ್ತಿವೆ, ಬಾಲ್ಕ ವಿವಾಹ ನಿಷೇಧ ಕಾಯ್ದೆಯಲ್ಲಿ ೧೮ ವರ್ಷ ಒಳಗಿನ ಹೆಣ್ಣು ಮಕ್ಕಳು ಮತ್ತು ೨೧ ವರ್ಷ ಒಳಗಿನ ಗಂಡು ಮಕ್ಕಳು ಮದುವೆ ಆಗುವುದು ಅಪರಾಧವಾಗಿದೆ ಎಂದರು.ಸಹಾಯವಾಣಿ ೧೦೯೮ ಬಳಸಿ

ಮನೆಯಲ್ಲಿ ಬಾಲ್ಯ ವಿವಾಹ ಮಾಡಲು ಪ್ರಯತ್ನಿಸಿದರೆ ಸಹಾಯವಾಣಿ ೧೦೯೮ ಉಚಿತ ಕರೆ ಮಾಡಿ, ಬಾಲ್ಯ ವಿವಾಹ ಮಾಡುವವರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ೨ ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅವಕಾಶವಿದೆ. ೧೮ ವರ್ಷದ ಒಳಗಿನ ಮಕ್ಕಳು ಮೋಟಾರು ವಾಹನಗಳನ್ನು ಚಲಾಯಿಸುತ್ತಿದ್ದು, ಅದು ಕಾನೂನಡಿ ಅಪರಾಧ ಎಂದು ನ್ಯಾಯಾಧೀಶರು ತಿಳಿಸಿದರು.ಮಕ್ಕಳು ಮಾಧಕ ವಸ್ತುಗಳು ಮತ್ತು ತಂಬಾಕು ಉತ್ಪನ್ನಗಳ ವ್ಯಸನಿಗಳಾಗುತ್ತಿದ್ದು, ಮಕ್ಕಳು ಅದರಿಂದ ದೂರವಿರಬೇಕು. ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು ಪಾಲಕರಿಗೆ ಒಳ್ಳೆಯ ಹೆಸರು ತರಬೇಕು. ವಿದ್ಯಾರ್ಥಿಗಳು ಪ್ರೀತಿ, ಪ್ರೇಮ ಎಂಬ ವ್ಯಾಮೋಹಕ್ಕೆ ಒಳಗಾಗಬಾರದು ಎಂದು ಹೇಳಿದರು.

ಹೆಣ್ಣು ಮಕ್ಕಳಿಗೂ ಆಸ್ತಿ ಹಕ್ಕುಹೆಣ್ಣು ಮಕ್ಕಳಿಗೆ ಸಮಾನತೆ ಹಕ್ಕಿನ ಬಗ್ಗೆ ಮಾಹಿತಿ ನೀಡಿದರು. ಹೆಣ್ಣು ಮಕ್ಕಳು ಗಂಡು ಮಕ್ಕಳಂತೆ ನಮ್ಮ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನವಾದ ಹಕ್ಕನ್ನು ಹೊಂದಿರುತ್ತಾರೆಂದು ಕಾನೂನಿನ ಅರಿವು ಮಕ್ಕಳಿಗೆ ತಿಳಿಸಿದರು. ವರದಕ್ಷಿಣೆ ಕೊಡುವುದು ಮತ್ತು ತೆಗೆದುಕೊಳ್ಳುವುದು ತಪ್ಪು ಆ ರೀತಿ ಕಂಡು ಬಂದಲ್ಲಿ ಕೊಡುವವರಿಗೆ ಮತ್ತು ತೆಗೆದುಕೊಳ್ಳುವವರಿಗೆ ಕಾನೂನು ಕಾಯ್ದೆಯ ಆಡಿ ಶಿಕ್ಷವಾಗುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ತಮ್ಮ ಜನನ ಪ್ರಮಾಣ ಪತ್ರ ಮಾಹಿತಿ ನೀಡಿ, ತಮಲ್ಲಿ ಜನನ ಪ್ರಮಾಣ ಪತ್ರ ಇಲ್ಲವೆ ಇದ್ದಲ್ಲಿ ನಮ್ಮ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರಕ್ಕೆ ಮಾಹಿತಿ ನೀಡಿ ಪಡೆದುಕೊಳ್ಳಬಹುದು ಎಂದು ಹೇಳಿದರು.ಬಾಲ್ಯವಿವಾಹ ಅಪರಾಧ

ಸಹಾಯಕ ಕಾನೂನು ನೆರವು ಅಭಿರಕ್ಷಕರು ಕಲಾವತಿ ಮಾತನಾಡಿ, ಬಾಲ್ಯ ವಿವಾಹ ಮಾಡುವವರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಶಿಕ್ಷೆಯಾಗುತ್ತದೆ, ಮನೆಯಲ್ಲಿ ಬಾಲ್ಯ ವಿವಾಹ ಮಾಡಲು ಪ್ರಯತ್ನಿಸಿದರೆ ಮಕ್ಕಳ ಸಹಾಯವಾಣಿ ೧೦೯೮ಗೆ ಕರೆ ಮಾಡಿ, ಹೆಣ್ಣು ಮಕ್ಕಳಿಗೆ ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶದ ಬಗ್ಗೆ ಮಾಹಿತಿ ನೀಡಿದರು.