ಮಕ್ಕಳಿಗೆ ಶಿಕ್ಷಣದ ಅರಿವು ಮೂಡಿಸಿರಿ

| Published : Jun 16 2024, 01:46 AM IST

ಸಾರಾಂಶ

ಪೋಷಕರು ತಮ್ಮ ಮಕ್ಕಳನ್ನು ಕೂಲಿಗೆ ಕಳುವಹಿಸಬಾರದು. ಬಾಲಕಾರ್ಮಿಕ ಪದ್ಧತಿ ವಿರೋಧಿಸಿ ಪೋಷಕರು ಮಕ್ಕಳಿಗೆ ಶಿಕ್ಷಣದ ಅರಿವು ಮೂಡಿಸಿರಿ

ಕುರುಗೋಡು: ಪೋಷಕರು ತಮ್ಮ ಮಕ್ಕಳನ್ನು ಕೂಲಿಗೆ ಕಳುವಹಿಸಬಾರದು. ಬಾಲಕಾರ್ಮಿಕ ಪದ್ಧತಿ ವಿರೋಧಿಸಿ ಪೋಷಕರು ಮಕ್ಕಳಿಗೆ ಶಿಕ್ಷಣದ ಅರಿವು ಮೂಡಿಸಿರಿ ಎಂದು ಕುರುಗೋಡು ತಹಶೀಲ್ದಾರ್ ಕೆ.ರಾಘವೇಂದ್ರ ರಾವ್ ಕರೆ ನೀಡಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಮತ್ತು ಕಾರ್ಮಿಕ ಇಲಾಖೆ, ಬಾಲಕಾರ್ಮಿಕ ಯೋಜನೆ ಸಂಯುಕ್ತಾಶ್ರಯದಲ್ಲಿ ವಿಶ್ವಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ರಾಷ್ಟದ ಸಂಪತ್ತು. ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕ, ನೈತಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಅವಕಾಶಗಳನ್ನು ತಡೆಗಟ್ಟುತ್ತದೆ. ಕಲಿಯುವ ವಯಸ್ಸಿನಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿದು ದುಡಿಮೆಯಲ್ಲಿ ತೊಡಗಿಕೊಳ್ಳುವುದು ಅತ್ಯಂತ ಕಳವಳಕಾರಿ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಪೋಷಕರು ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳುಹಿಸದೇ ಶಿಕ್ಷಣ ಪಡೆಯಲು ಶಾಲೆಗೆ ಕಳುಹಿಸಬೇಕೆಂದು ಮನವಿ ಮಾಡಿದರು. ಕಾರ್ಮಿಕ ಇಲಾಖೆಯ ಜಿಲ್ಲಾ ಯೋಜನಾಧಿಕಾರಿ ಮೌನೇಶ ಪ್ರಸ್ತಾವಿವಾಗಿ ಮಾತನಾಡಿದ ಅವರು, ೧೮ ವರ್ಷ ಒಳಗಿನ ಮಕ್ಕಳನ್ನು ದುಡಿಮೆಗೆ ಕಳುಹಿಸದೆ ಪ್ರತಿಯೊಬ್ಬ ಪೋಷಕರು ಶಾಲೆಗೆ ಕಳುಹಿಸಬೇಕು. ಒಂದು ವೇಳೆ ಮಕ್ಕಳನ್ನು ಮೆಕಾನಿಕ್‌ ಶಾಪ್, ಗ್ಯಾರೇಜ್, ಹೋಟೆಲ್ ಸೇರಿದಂತೆ ಇತರೆಡೆ ಕಳುಹಿಸದರೆ ಮಾಲೀಕರಿಗೆ ಸಹ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ಕುರುಗೋಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ರಾಮಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಗ್ರೇಡ್-೨ತಹಶೀಲ್ದಾರ್ ಮಲ್ಲೇಶಪ್ಪ, ಕುರುಗೋಡು ತಾಪಂ ನರೇಗಾ ಸಹಾಯಕ ನಿರ್ದೇಶಕ ಶಿವರಾಮ ರೆಡ್ಡಿ, ಕಾರ್ಮಿಕ ಅಧಿಕಾರಿ ರವಿದಾಸ್, ಶಿಕ್ಷಣ ಸಂಯೋಜಕ ಭಜುಂಗಾಚಾರ್ಯ, ಕಾಲೇಜು ಉಪನ್ಯಾಸಕ ಎಂ.ರಾಮಯ್ಯ,

ಕುರುಗೋಡು ಗ್ರಾಮ ಲೆಕ್ಕಾಧಿಕಾರಿ ಟಿ.ಯಮನೂರಪ್ಪ, ಬಾದನಹಟ್ಟಿ ಕೊಟ್ರೇಶ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.