ಸಾರಾಂಶ
ವಿಶ್ವ ಪರಿಸರ ದಿನ
ಬೇಲೂರು: ವಿದ್ಯಾರ್ಥಿಗಳಿಗೆ ಪೋಷಕರು ಹಾಗೂ ಶಿಕ್ಷಕರು ಪರಿಸರದ ಅರಿವು ಮೂಡಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಹಾಗೂ ನ್ಯಾಯಾಧೀಶೆ ಎಂ.ಎಸ್.ಶಶಿಕಲಾ ಹೇಳಿದರು.ವಿದ್ಯಾರ್ಥಿಗಳಿಗೆ ಪೋಷಕರು ಹಾಗೂ ಶಿಕ್ಷಕರು ಪರಿಸರದ ಅರಿವು ಮೂಡಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಹಾಗೂ ನ್ಯಾಯಾಧೀಶೆ ಎಂ.ಎಸ್.ಶಶಿಕಲಾ ಹೇಳಿದರು. ಬೇಲೂರಿನಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ ತಾಲೂಕು ಆಡಳಿತ, ಸತ್ಯ ಸಾಯಿ ಸತ್ಯ ನಿಕೇತನ ಗುರುಕುಲ ಚನ್ನೇನಹಳ್ಳಿ ಜಂಟಿಯಾಗಿ ಆಯೋಜನೆ ಮಾಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೀಡುವುದರ ಮೂಲಕ ಉದ್ಘಾಟನೆ ಮಾಡಿ ಮಾತನಾಡಿ, ‘ನಮ್ಮ ಮನೆಯ ಸ್ವಚ್ಛತೆ ಬಗ್ಗೆ ತಿಳಿಸುವಂತೆ ಪರಿಸರವನ್ನು ಬೆಳೆಸುವ ಇಚ್ಛಾಶಕ್ತಿಯನ್ನು ಬಾಲ್ಯದಲ್ಲಿಯೇ ಶಾಲಾ ಮಟ್ಟದಲ್ಲಿ ವಿದ್ಯಾಭ್ಯಾಸದ ಜೊತೆ ಜೊತೆಗೆ ಅರಿವು ಮೂಡಿಸಬೇಕು’ ಎಂದು ಹೇಳಿದರು.
ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಿರಿಯ ವಿಭಾಗ ಸಿವಿಲ್ ನ್ಯಾಯಾಧೀಶ ನಾಗೇಂದ್ರ ಮಾತನಾಡಿ, ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹ ಸತ್ಯಸಾಯಿ ಸತ್ಯನೀಕೇತನ ಗುರುಕುಲದಲ್ಲಿರುವ ವಿದ್ಯಾರ್ಥಿಗಳೊಂದಿಗೆ ಪರಿಸರದ ಬಗ್ಗೆ ಅರಿವು ಮೂಡಿಸುವುದರ ಮೂಲಕ ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಂತೋಷ ತಂದಿದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಪ್ರಕೃತಿಯ ಜೊತೆಗೆ ಬದುಕಬೇಕಾಗಿರುವುದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ತಮ್ಮ ಮನೆಯ ಮುಂದೆ ಒಂದೊಂದು ಗಿಡವನ್ನು ಬೆಳೆಸುವುದರ ಮೂಲಕ ಪ್ರಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಕಿವಿಮಾತು ಹೇಳಿದರು.ವಕೀಲರ ಸಂಘದ ಅಧ್ಯಕ್ಷ ಸಿ.ಎಂ. ಪೃಥ್ವಿ. ಕಾರ್ಯದರ್ಶಿ ಪುಟ್ಟಸ್ವಾಮಿ ಗೌಡ, ಶ್ರೀಧರ್. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಸತೀಶ್ ಎಚ್ ಕೆ., ತಾಲೂಕು ಆರೋಗ್ಯ ಅಧಿಕಾರಿ ಡಾ.ವಿಜಯ್, ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಸತ್ಯಸಾಯಿ ಗುರುಕುಲದ ಮುಖ್ಯಸ್ಥ ನವೀನ್, ನ್ಯಾಯಾಂಗ ಇಲಾಖೆ ನೌಕರರಾದ ಪ್ರಕಾಶ್, ಗಿರಿಯಪ್ಪ ಇದ್ದರು.