ಶಿಕ್ಷಣ ಸಂಸ್ಥೆಗಳು ಕಡ್ಡಾಯ ತಂಬಾಕು ಮುಕ್ತ ವಲಯವಾಗಲಿ: ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್

| Published : Dec 23 2023, 01:45 AM IST

ಶಿಕ್ಷಣ ಸಂಸ್ಥೆಗಳು ಕಡ್ಡಾಯ ತಂಬಾಕು ಮುಕ್ತ ವಲಯವಾಗಲಿ: ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್
Share this Article
  • FB
  • TW
  • Linkdin
  • Email

ಸಾರಾಂಶ

ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ

ಕನ್ನಡಪ್ರಭ ವಾರ್ತೆ ದಾವಣಗೆರೆ

ಇತ್ತೀಚಿಗೆ ಯುವಕರು ಗುಟ್ಕಾ, ತಂಬಾಕು ಹಾಗೂ ಮಾದಕ ವಸ್ತುಗಳಿಗೆ ಹೆಚ್ಚು ಬಲಿಯಾಗುತ್ತಿದ್ದು, ಇದರ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ತಂಬಾಕು ಮುಕ್ತ ಸಮಾಜಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಕರ್ನಾಟಕದಲ್ಲಿ ಪ್ರತಿದಿನಕ್ಕೆ 293 ಮಕ್ಕಳು ತಂಬಾಕು ಸೇವನೆಗೆ ಆಕರ್ಷಿತರಾಗುತ್ತಿದ್ದು, ಶಾಲಾ ಕಾಲೇಜುಗಳಲ್ಲಿ ತಂಬಾಕು ನಿಯಂತ್ರಣ ಕುರಿತಂತೆ ಹೆಚ್ಚಿನದಾಗಿ ಜಾಗೃತಿ ಮೂಡಿಸಬೇಕು. ಎಲ್ಲಾ ಶಿಕ್ಷಣ ಸಂಸ್ಥೆ ಮತ್ತು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ತಂಬಾಕು ಮುಕ್ತ ವಲಯ ನಾಮಫಲಕಗಳನ್ನು ಅಳವಡಿಸಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳಾಗಿ ಮಾಡುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳ ನಡೆಸಬೇಕು ಎಂದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 5 ಸಾವಿರ ಅಂಗಡಿಗಳಿದ್ದು, ಅದರಲ್ಲಿ ಕೇವಲ 1500 ಮಾತ್ರ ಲೈಸೆನ್ಸ್ ಪಡೆದು ತಂಬಾಕು ಮಾರಾಟ ಮಾಡುತ್ತಿದ್ದು, ಬಾಕಿ ಉಳಿದ ಅಂಗಡಿ ಮಾಲೀಕರಿಗೂ ಪರವಾನಗಿ ನೀಡಲು ಕ್ರಮವಹಿಸಬೇಕು ಲೈಸೆನ್ಸ್ ಪಡೆಯದೆ ತಂಬಾಕು ಮಾರಾಟ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ್ ಮ. ಕರೆಣ್ಣವರ ಮಾತನಾಡಿ, ತಾಲ್ಲೂಕು ಮಟ್ಟದ ಆರೋಗ್ಯಾಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳ ಕಾಯದೇ ತಾವೇ ಜವಾಬ್ದಾರಿ ವಹಿಸಿ ತಂಬಾಕು ನಿಯಂತ್ರಣ ತನಿಖಾ ದಳದ ಸದಸ್ಯರೊಂದಿಗೆ ತಾಲೂಕು ಮಟ್ಟದಲ್ಲಿ ಕಡ್ಡಾಯವಾಗಿ ತಿಂಗಳಿಗೆ ಒಂದು ತಂಬಾಕು ದಾಳಿ ಕೈಗೊಳ್ಳಬೇಕು ಹಾಗೂ ತ್ರೈಮಾಸಿಕ ಸಭೆ ಏರ್ಪಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ್ ಎಂ.ಸಂತೋಷ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಷಣ್ಮುಖಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಾಧಿಕಾರಿ ನಾಗೇಂದ್ರಪ್ಪ, ಪರಿಸರ ಅಧಿಕಾರಿ ಲಕ್ಷ್ಮೀಕಾಂತ್, ಎನ್.ಟಿ.ಸಿ.ಪಿ ಕಾರ್ಯಾಲಯ ಅಧಿಕಾರಿ ಡಾ.ಜಿ.ಡಿ. ರಾಘವನ್, ಚನ್ನಗಿರಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶಿವಕುಮಾರ್, ಆರ್.ಟಿ.ಒ ಕಚೇರಿ ಅಧೀಕ್ಷಕ ಪಿ.ಶಶಿಧರ ಇದ್ದರು. ಕೋಟ್‌..ಅಕ್ರಮ ಮದ್ಯ ಮಾರಾಟ ಪರಿಶೀಲನೆ ನಡೆಸಿ ಎನ್‌ಎಸ್‌ಎಸ್ ಕ್ಯಾಂಪ್‌ಗಳಲ್ಲಿ ತಂಬಾಕು ನಿಯಂತ್ರಣ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಗೋಡೆ ಬರಹಗಳ ಬರೆಸಬೇಕು. ದಾವಣಗೆರೆ ವಿಶ್ವವಿದ್ಯಾನಿಲಯ ಸುತ್ತಮುತ್ತ ಅಕ್ರಮವಾಗಿ ಮದ್ಯ ಹಾಗೂ ತಂಬಾಕು ಮಾರಾಟ ಕೇಳಿಬರುತ್ತಿದ್ದು ಪೊಲೀಸ್ ಅಧಿಕಾರಿಗಳು ಕೂಡಲೇ ಈ ಕುರಿತು ಪರಿಶೀಲನೆ ನಡೆಸಬೇಕು. ಮಹಾವೀರ್ ಕರೆಣ್ಣವರ, ಹಿರಿಯ ಸಿವಿಲ್ ನ್ಯಾಯಾಧೀಶ.....ಕ್ಯಾಪ್ಷನಃ22ಕೆಡಿವಿಜಿ32ಃ

ದಾವಣಗೆರೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.