ರಾಷ್ಟ್ರೀಯ ಲೋಕ ಅದಾಲತ್ ಸದುಪಯೋಗ ಪಡಿಸಿಕೊಳ್ಳಿ: ನ್ಯಾ. ರಂಗಸ್ವಾಮಿ

| Published : Nov 21 2024, 01:03 AM IST

ರಾಷ್ಟ್ರೀಯ ಲೋಕ ಅದಾಲತ್ ಸದುಪಯೋಗ ಪಡಿಸಿಕೊಳ್ಳಿ: ನ್ಯಾ. ರಂಗಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.

ಡಿ. 14ರಂದು ಅದಾಲತ್ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶಕನ್ನಡಪ್ರಭ ವಾರ್ತೆ ಯಲಬುರ್ಗಾ

ಡಿ. ೧೪ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಜೆ. ಹೇಳಿದರು.

ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು. ಬೆಂಗಳೂರು ರಾಜ್ಯ ಕಾನೂನು ಸೇವೆಗಳ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಲೋಕ್ ಆದಾಲತ್ ನಡೆಯಲಿದೆ. ಕಕ್ಷಿದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಚೆಕ್ ಅಮಾನ್ಯ ಪ್ರಕರಣ, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು ಇತರೆ ಪ್ರಕರಣಗಳನ್ನು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ) ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ನ್ಯಾಯಾಲಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೊ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಬಾಂಧವ್ಯ ಉಳಿದು ವಿವಾದ ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದರು.

ವಕೀಲರ ಸಂಘದ ತಾಲೂಕಾಧ್ಯಕ್ಷ ಪ್ರಕಾಶ ಬೇಲೇರಿ ಮಾತನಾಡಿದರು.

ಈ ಸಂದರ್ಭದಲ್ಲಿ ಸರ್ಕಾರಿ ಅಭಿಯೋಜಕ ರವಿ ಹುಣಿಸಿಮರದ, ಹಿರಿಯ ವಕೀಲರಾದ ಬಿ.ಎಂ. ಶಿರೂರು, ಎಸ್.ಸಿ. ಗದಗಿನ, ಎ.ಎಂ. ಪಾಟೀಲ, ಎಸ್.ಎಸ್. ಅಂಗಡಿ, ಜಿ.ಕೆ. ಲಲಾಗೊಂಡರ ಸೇರಿದಂತೆ ಮತ್ತಿತರರು ಇದ್ದರು.