ಯುವನಿಧಿ ಯೋಜನೆ ಸದುಪಯೋಗಪಡಿಸಿಕೊಳ್ಳಿ- ಮೀನಾ ನಾಗರಾಜ್

| Published : Jan 11 2024, 01:31 AM IST

ಸಾರಾಂಶ

ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವ ಜನರು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆ ಸದುಪಯೋಗ ಪಡೆಯುವಂತೆ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವ ಜನರು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿ, ಡಿಪ್ಲೋಮಾ ಅಥವಾ ಪದವಿ ಮುಗಿಸಿದ ತಕ್ಷಣ ಉದ್ಯೋಗ ಸಿಗುವುದು ಕಷ್ಟಕರವಾಗಿರುತ್ತದೆ. ಯುವನಿಧಿಯಡಿ ದೊರಕುವ ನಿರುದ್ಯೋಗ ಭತ್ಯೆಯನ್ನು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಕೌಶಲ್ಯ ತರಬೇತಿ ಪಡೆಯಲು, ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧರಾಗಲು ಅನುಕೂಲ ವಾಗುತ್ತದೆ ಎಂದರು.2022-23 ನೇ ಶೈಕ್ಷಣಿಕ ಸಾಲಿನ 2023 ರಲ್ಲಿ ಪದವಿ ಅಥವಾ ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಕನಿಷ್ಟ 6 ತಿಂಗಳ ಅವಧಿಯೊಳಗೆ ಸರ್ಕಾರಿ ಅಥವಾ ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೇ ಇರುವವರು, ಕರ್ನಾಟಕದಲ್ಲಿ ವಾಸವಿ ರುವವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು ಎಂದರು. ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುವವರು ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ವೆಬ್ ಸೈಟ್ https://sevasindhu.karnataka.gov.in ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005999918 ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕ ರಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸೋಮಶೇಖರ್, ಐಡಿಎಸ್‌ಜಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಾಂದಿನಿ, ಕೌಶಲ್ಯ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಪ್ರಶಾಂತ್, ಜಿಲ್ಲಾ ಉದ್ಯೋಗಾಧಿಕಾರಿ ಮಂಜುನಾಥ್ ಹಾಗೂ ಐಡಿಎಸ್‌ಜಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಪೋಟೋ ಫೈಲ್‌ ನೇಮ್‌ 10 ಕೆಸಿಕೆಎಂ 2