ಸಾರಾಂಶ
ಕನ್ನಡಪ್ರಭ ವಾರ್ತೆ ಹಾರೋಹಳ್ಳಿ ತಾಲೂಕಿನಲ್ಲಿರುವ ಅರ್ಹ ಫಲಾನುಭವಿಗಳಿಗೆ ವೃದ್ಧಾಪ್ಯ, ಅಂಗವಿಕಲ, ವಿಧವಾ ಸೇರಿದಂತೆ ಹಲವು ಮಾಸಾಶನಗಳನ್ನು ಸಕಾಲಕ್ಕೆ ದೊರೆಯುವಂತೆ ಮಾಡಬೇಕು. ಜನರನ್ನು ಕಚೇರಿಗಳಿಗೆ ಅಲೆದಾಡಿಸದೆ ಸಮಸ್ಯೆಗಳನ್ನು ಸಮರ್ಪಕವಾಗಿ ಪರಿಹರಿಸುವಂತೆ ಎಂದು ಶಾಸಕ ಇಕ್ಬಾಲ್ ಹುಸೇನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಾರೋಹಳ್ಳಿ, ಜನಸ್ಪಂದನಾ, ಶಾಸಕ ಇಕ್ಬಾಲ್ ಹುಸೇನ್ಕನ್ನಡಪ್ರಭ ವಾರ್ತೆ ಹಾರೋಹಳ್ಳಿ ತಾಲೂಕಿನಲ್ಲಿರುವ ಅರ್ಹ ಫಲಾನುಭವಿಗಳಿಗೆ ವೃದ್ಧಾಪ್ಯ, ಅಂಗವಿಕಲ, ವಿಧವಾ ಸೇರಿದಂತೆ ಹಲವು ಮಾಸಾಶನಗಳನ್ನು ಸಕಾಲಕ್ಕೆ ದೊರೆಯುವಂತೆ ಮಾಡಬೇಕು. ಜನರನ್ನು ಕಚೇರಿಗಳಿಗೆ ಅಲೆದಾಡಿಸದೆ ಸಮಸ್ಯೆಗಳನ್ನು ಸಮರ್ಪಕವಾಗಿ ಪರಿಹರಿಸುವಂತೆ ಎಂದು ಶಾಸಕ ಇಕ್ಬಾಲ್ ಹುಸೇನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಹಾರೋಹಳ್ಳಿ ತಾಲೂಕು ಕಚೇರಿ ಆವರಣದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕಿನ ಕೆಲ ಗ್ರಾಮಗಳಲ್ಲಿ ಸ್ಮಶಾನದ ಕೊರತೆಯಿರುವ ಕಡೆಗಳಲ್ಲಿ ಸ್ಥಳಗಳನ್ನು ಗುರುತಿಸಿ ಸ್ಮಶಾನಕ್ಕೆ ಜಾಗ ಮಂಜೂರು ಮಾಡಬೇಕು ಎಂದರು.
ತಾಲೂಕಿನ ಮರಳವಾಡಿ, ಕಗ್ಗಲಹಳ್ಳಿ ಸೇರಿದಂತೆ ಕೆಲ ಪಂಚಾಯತಿಗಳಲ್ಲಿ ಬಗರ್‌ಹುಕುಂ ಸಾಗುವಳಿ ಚೀಟಿ ಸಿಗದೇ ಫಲಾನುಭವಿಗಳು ತೊಂದರೆಯಲ್ಲಿದ್ದು, ಮುಂದಿನ ಜನಸ್ಪಂದನ ಸಭೆಯ ವೇಳೆಗೆ ಸಾಗುವಳಿ ಚೀಟಿಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಲು ಅಧಿಕಾರಿಗಳು ಅಗತ್ಯಕ್ರಮ ಕೈಗೊಳ್ಳಬೇಕು. ಹಾಲಿ ಹಾಗೂ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ಸಕಾಲಕ್ಕೆ ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದರು.ಅಧಿಕಾರಿಗಳಿಗೆ ಎಚ್ಚರಿಕೆ:ತಾಲೂಕಿನಲ್ಲಿ ಜನರ ಸಮಸ್ಯೆಗಳಿಗಾಗಿ ಬರುವ ಅರ್ಜಿಗಳ ತ್ವರಿತವಾಗಿ ಪರಿಹರಿಸಿ ವಿಲೇವಾರಿ ಮಾಡಬೇಕು, ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲಾದ ಅಧಿಕಾರಿಗಳು ಬೇರೆಡೆ ವರ್ಗ ಮಾಡಿಸಿಕೊಂಡು ಹೋಗುವಂತೆ ಶಾಸಕರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಡೆಂಘೀ ಎಚ್ಚರಿಕೆ: ರಾಜ್ಯದ ಹಲವೆಡೆ ಡೆಂಘೀ ಜನರನ್ನು ಕಾಡುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಮುಖ್ಯವಾಗಿ ಹಾರೋಹಳ್ಳಿ ಪಟ್ಟಣದಲ್ಲಿ ಡೆಂಘೀ ನಿಯಂತ್ರಣಕ್ಕಾಗಿ ಪಟ್ಟಣದಲ್ಲಿ ಒಂದು ವಾರದೊಳಗೆ ಪಟ್ಟಣ ಪಂಚಾಯತಿ ಅಧಿಕಾರಿಗಳು ಸ್ವಚ್ಛತೆ ನಡೆಸಬೇಕು. ಆರೋಗ್ಯ ಅಧಿಕಾರಿಗಳು ಸಹ ಡೆಂಗ್ಯು ನಿಯಂತ್ರಣ ಕುರಿತು ಜನರಿಗೆ ಸಕಾಲಕ್ಕೆ ಚಿಕಿತ್ಸೆ ನೀಡಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುವ ಮೂಲಕ ಇದರ ನಿಯಂತ್ರಣಕ್ಕೆ ಮುಂದಾಗಬೇಕು ಎಂದರು.ಕಂದಾಯ ಇಲಾಖೆಯಲ್ಲಿ ಅಧಿಕಾರಿಗಳು ಆಶ್ರಯ ನಿವೇಶನ ಸೇರಿದಂತೆ ಬೇರೆಬೇರೆಯವರ ನಿವೇಶನ ಮತ್ತು ಜಮೀನುಗಳನ್ನು ಮತ್ತೊಬ್ಬರ ಹೆಸರಿಗೆ ಖಾತೆ ಮಾಡಿಕೊಡುತ್ತಿರುವ ಪ್ರಕರಣಗಳು ಕೇಳಿಬರುತ್ತಿವೆ. ಅಂತಹ ಜನವಿರೋಧಿ ನೀತಿಯಲ್ಲಿ ತೊಡಗಿರುವ ಅಧಿಕಾರಿಗಳ ಬಗ್ಗೆ ದೂರು ಬಂದಲ್ಲಿ ಮುಂದಿನ ದಿನಗಳಲ್ಲಿ ಅಗತ್ಯ ಕಾನೂನು ಕ್ರಮಕೈಗೊಳ್ಳಲಾಗುವುದು. ತಾಲೂಕಿನ ಅಭಿವೃದ್ಧಿಗೆ ಪ್ರತಿಯೊಬ್ಬ ಅಧಿಕಾರಿಯೂ ಕೈಜೋಡಿಸಬೇಕು ಎಂದು ಇಕ್ಬಾಲ್ ಹುಸೇನ್ ಹೇಳಿದರು.ತಹಸೀಲ್ದಾರ್ ಆರ್.ಶಿವಕುಮಾರ್, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಶ್ವೇತಬಾಯಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜೆಸಿಬಿ ಅಶೋಕ್, ಜಿ.ಪಂ. ಮಾಜಿ ಅಧ್ಯಕ್ಷ ನಾಗರಾಜು, ಮುಖಂಡರಾದ ಮೋಹನ್‌ವೊಳ್ಳ, ಡಿ.ಪಿ.ಕೆ ಬಾಲಾಜಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.-------------------------25ಕೆಆರ್ ಎಂಎನ್ 1.ಜೆಪಿಜಿಹಾರೋಹಳ್ಳಿ ತಾಲೂಕು ಕಚೇರಿಯಲ್ಲಿ ಶಾಸಕ ಇಕ್ಬಾಲ್ ಹುಸೇನ್ ಜನಸ್ಪಂದನಾ ಸಭೆ ನಡೆಸಿದರು.----------------------------