ಕುಷ್ಠರೋಗ ಪತ್ತೆ ಅಭಿಯಾನ ಯಶಸ್ವಿಗೊಳಿಸಿ : ಡಿಸಿ

| Published : Jul 30 2024, 12:39 AM IST

ಸಾರಾಂಶ

ಜಿಲ್ಲೆಯಲ್ಲಿ ಕುಷ್ಠರೋಗ ನಿಯಂತ್ರಣಕ್ಕೆ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಅಭಿಯಾನವನ್ನು ಯಶಸ್ವಗೊಳಿಸಲು ಸರ್ವ ರೀತಿಯ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಜಿಲ್ಲೆಯನ್ನು ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸುವ ದಿಶೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಕುಷ್ಠರೋಗ ಪ್ರಕರಣಗಳ ಪತ್ತೆ ಅಭಿಯಾನದ ಪೂರ್ವಸಿದ್ಧತಾ ಸಭೆಯಲ್ಲಿ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಕುರಿತ ಪ್ರಚಾರ ಸಾಮಗ್ರಿ ಹಾಗೂ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬರುವ ಪ್ರದೇಶಗಳನ್ನು ಗುರುತಿಸಿ, ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸೂಚಿಸಿದರು.

ಕುಷ್ಠರೋಗ ಪ್ರಕರಣ ಪತ್ತೆಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಅಗತ್ಯವಿದ್ದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪಡೆದುಕೊಂಡು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಕುಷ್ಠರೋಗ ಪ್ರಕರಣ ಕಂಡು ಬಂದವರ ಕುಟುಂಬದವರಿಗೂ ಎಸ್.ಡಿ.ಆರ್ (ಏಕ ಔಷಧ ರಿಫಾಂಪಿಷನ್) ಔಷಧಿಯನ್ನು ನೀಡಲು ಜಿಲ್ಲಾಧಿಕಾರಿ ಸೂಚಿಸಿದರು.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪ್ರಭುಲಿಂಗ ಮಾನಕರ್, ಆರ್.ಸಿ.ಎಚ್.ಒ ಡಾ. ಮಲ್ಲಪ್ಪ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಸಾಜಿದ್, ಯಾದಗಿರಿ ವೈಧ್ಯಾಧಿಕಾರಿ ಡಾ. ಹಣಮಂತರೆಡ್ಡಿ, ಮಹಿಳಾ ಮತ್ತು ಮಕ್ಕಳು ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ ಸೇರಿದಂತೆ ಇತರರಿದ್ದರು.