ಸಾರಾಂಶ
ವಿಜಯಪುರ: ಎಲ್ಲ ಸರ್ಕಾರಿ ನೌಕರರ ಹಾಗೂ ಅಧಿಕಾರಿಗಳ ಆಸ್ತಿ ವಿವರ ಲೋಕಾಯುಕ್ತ ಸಂಸ್ಥೆಗೆ ಲಭ್ಯವಾಗುವಂತಹ ವ್ಯವಸ್ಥೆ ರೂಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಜಿಲ್ಲಾಧ್ಯಕ್ಷ ಅಶೋಕ ಜಾಧವ ಮಾತನಾಡಿ, ರಾಜ್ಯ ಸರ್ಕಾರದ ಇಲಾಖಾ ಅಧಿಕಾರಿಗಳು ಅವರ ಅಧೀನದ ಅಧಿಕಾರಿಗಳ ಹಾಗೂ ನೌಕರರ ಆಸ್ತಿ ವಿವರಗಳನ್ನು ನೀಡಲು ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ. ಇದರಿಂದಾಗಿ ಕರ್ನಾಟಕ ಲೋಕಾಯುಕ್ತರು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪರಿಹಾರೋಪಾಯವನ್ನು ಸೂಚಿಸಿದ್ದಾರೆ. ಈ ವಿಚಾರವಾಗಿ ಅವರು ಎಲ್ಲ ಸರ್ಕಾರಿ ನೌಕರರ ಆಸ್ತಿ ವಿವರವನ್ನು ಕಡ್ಡಾಯವಾಗಿ ಪ್ರತಿವರ್ಷ ಸಂಗ್ರಹಿಸಿ, ಆ ವಿವರಗಳನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ, ಆ ವಿವರಗಳು ನಿರಂತರವಾಗಿ ಲೋಕಾಯುಕ್ತ ಸಂಸ್ಥೆಗೆ ಮುಕ್ತವಾಗಿ ಲಭ್ಯವಾಗುವಂತಹ ವ್ಯವಸ್ಥೆಯನ್ನು ರೂಪಿಸಬೇಕೆಂದು ತಿಳಿಸಿದರು.ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ಕೇಂದ್ರ ಸರ್ಕಾರದ ನೌಕರರು ತಮ್ಮ ಆಸ್ತಿ ವಿವರಗಳನ್ನು ಲೋಕಪಾಲರಿಗೆ ಸಲ್ಲಿಸುತ್ತಿರಬೇಕಾದರೆ ಅದೇ ರೀತಿ ರಾಜ್ಯ ಸರ್ಕಾರದ ನೌಕರರ ವಿವರಗಳನ್ನು ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಗೆ ಲಭ್ಯವಾಗುವಂತೆ ಮಾಡುವುದಕ್ಕೆ ಯಾವುದೇ ವಿರೋಧ ಇರಬಾರದು ಎಂದರು.
ಲಕ್ಷ್ಮಣ ಚಡಚಣ, ದುರ್ಗಪ್ಪ ಬೂದಿಹಾಳ, ವಿಕ್ರಮ ವಾಘಮೋರೆ, ರಾಕೇಶ ಇಂಗಳಗಿ, ಪ್ರವೀಣ ಕನಸೇ ಇದ್ದರು.