ಛತ್ರಪತಿ ಶಿವಾಜಿ ಜಯಂತಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಸಿದ್ರಾಮೇಶ್ವರ

| Published : Feb 05 2025, 12:33 AM IST

ಛತ್ರಪತಿ ಶಿವಾಜಿ ಜಯಂತಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಸಿದ್ರಾಮೇಶ್ವರ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾ ಕೇಂದ್ರದಲ್ಲಿ ಫೆ. 25ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೂಚನೆಕನ್ನಡಪ್ರಭ ವಾರ್ತೆ ಕೊಪ್ಪಳ

ಜಿಲ್ಲಾ ಕೇಂದ್ರದಲ್ಲಿ ಫೆ. 25ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೂಚನೆ ನೀಡಿದರು.

ಸೋಮವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕುರಿತು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್-2ರ ಸಭಾಂಗಣದಲ್ಲಿ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾಜದ ಮುಖಂಡರ ಕೋರಿಕೆಯ ಮೇರೆಗೆ ಕೊಪ್ಪಳ ಜಿಲ್ಲಾ ಮಟ್ಟದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಫೆ. 19ರ ಬದಲಿಗೆ ಫೆ. 25ರಂದು ಆಯೋಜಿಸಲಾಗುವುದು. ಅಂದು 10.30ಕ್ಕೆ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪೂಜೆ, ಛತ್ರಪತಿ ಶಿವಾಜಿ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮ ನಡೆಯಲಿದೆ. ವೇದಿಕೆ ಕಾರ್ಯಕ್ರಮದ ಬಳಿಕ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆ ಸಾಹಿತ್ಯ ಭವನದಿಂದ ಪ್ರಾರಂಭಗೊಂಡು ಜವಾಹರ ರಸ್ತೆ ಮೂಲಕ ಗಡಿಯಾರ ಕಂಬದ ಹತ್ತಿರದ ಕೋಟೆ ರಸ್ತೆಯಲ್ಲಿರುವ ಛತ್ರಪತಿ ಶಿವಾಜಿ ವೃತ್ತದ ವರೆಗೆ ಜರುಗಲಿದೆ ಎಂದರು.ಸಮಾರಂಭ ದಿನದಂದು, ಸಾಹಿತ್ಯ ಭವನ ಮತ್ತು ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ಈ ಜಯಂತಿಯನ್ನು ಜಿಲ್ಲೆಯ ಎಲ್ಲ ಶಾಲೆ-ಕಾಲೇಜುಗಳು, ಗ್ರಾಮ ಪಂಚಾಯಿತಿ ಮತ್ತು ಇತರೆ ಕಚೇರಿಗಳಲ್ಲಿ ಆಚರಿಸುವಂತಾಗಬೇಕು. ಜಿಲ್ಲಾಮಟ್ಟದ ಜಯಂತಿಗಾಗಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಜಯಂತಿ ಯಶಸ್ವಿಗೆ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಕೊಪ್ಪಳ ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ್, ಛತ್ರಪತಿ ಶಿವಾಜಿ ಮಹಾರಾಜ (ಮರಾಠ) ಸಮಾಜದ ಮುಖಂಡರಾದ ಮಾರುತಿ ಎನ್., ಫಕೀರಪ್ಪ ಆರೇರ್, ಉಮೇಶ ಸುರ್ವೆ, ಚಂದ್ರಪ್ಪ ಬಡಿಗೇರ, ರಮೇಶ ಘೋರ್ಪಡೆ, ಪ್ರಾಣೇಶ ಕಂಪ್ಲಿ, ಹನುಮಂತ ಕಾರಟಗಿ, ಬಸವರಾಜ ಕಂಪ್ಲಿ, ಮಹಾಂತೇಶ, ಪ್ರತಾಪ ಬಡಿಗೇರ ಸೇರಿದಂತೆ ಮತ್ತಿತರರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.