ಸಂವಿಧಾನ ಜಾಗೃತಿ ಜಾಥಾಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

| Published : Jan 26 2024, 01:45 AM IST

ಸಾರಾಂಶ

ದೊಡ್ಡಬಳ್ಳಾಪುರ: ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ದೊಡ್ಡಬಳ್ಳಾಪುರ: ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದಲ್ಲಿ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದ ಅನುಷ್ಠಾನ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

75ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಜಾಗೃತಿ ಜಾಥದ ಸ್ಥಬ್ಧ ಚಿತ್ರ ವು ಜ. 26ರಿಂದ ಫೆಬ್ರವರಿ 23ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ ಎಂದರು.

ಜಾಗೃತಿ ಜಾಥಾದ ಸ್ತಬ್ಧ ಚಿತ್ರ ಮೆರವಣಿಗೆಯು ಸುಗಮವಾಗಿ ಸಂಚರಿಸಲು ಜಿಲ್ಲಾಮಟ್ಟದ, ತಾಲೂಕು ಮಟ್ಟದಲ್ಲಿ ಪ್ರಗತಿ ಚಿಂತಕರು, ಸಮುದಾಯ ಮುಖಂಡರು, ಸಾಮಾಜಿಕ ಕಾರ್ಯಕರ್ತರನ್ನು ಒಳಗೊಂಡ ಸಮಿತಿ ರಚಿಸಬೇಕು, ಸಂವಿಧಾನ ಆಶಯಗಳನ್ನು ಒಳಗೊಂಡ ಸ್ತಬ್ಧಚಿತ್ರ ಸಿದ್ದಪಡಿಸಬೇಕು. ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಸಂವಿಧಾನ ಜಾಗೃತಿ ಜಾಥಾ ನಡೆಯಬೇಕು. ಜಾಗೃತಿ ಜಾಥಾ ಸಂಚರಿಸಲಿರುವ ಆಯಾ ವ್ಯಾಪ್ತಿಯಲ್ಲಿ ಪಂಚಾಯಿತಿ ಅಧ್ಯಕ್ಷರು, ಮುಖಂಡರು, ಅಧಿಕಾರಿಗಳು ಶಿಷ್ಟಾಚಾರದಂತೆ ಸಂವಿಧಾನ ಜಾಗೃತಿ ಜಾಥವನ್ನು ಸ್ವಾಗತಿಸಬೇಕು, ಹೀಗಾಗಿ ಸಂಚರಿಸುವ ಮಾರ್ಗ ವಿವರಣೆಯನ್ನು ಮೊದಲೇ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಿರಬೇಕು. ಒಟ್ಟಾರೆಯಾಗಿ ಯಾವುದೇ ಗೊಂದಲಗಳಿಲ್ಲದೇ ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮುದಾಯ ಮುಖಂಡರು ಉಪಸ್ಥಿತರಿದ್ದರು.

25ಕೆಡಿಬಿಪಿ4-

ಬೆಂ.ಗ್ರಾ. ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳುವ ಕುರಿತು ಸಚಿವ ಕೆ.ಎಚ್.ಮುನಿಯಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.