ಓಬವ್ವ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

| Published : Nov 08 2024, 12:36 AM IST

ಓಬವ್ವ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಚಿತ್ರದುರ್ಗ: ಜಿಲ್ಲಾಡಳಿತದಿಂದ ನ.11 ರಂದು ಜಿಲ್ಲಾ ಕೇಂದ್ರದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿಯನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಚಿತ್ರದುರ್ಗ: ಜಿಲ್ಲಾಡಳಿತದಿಂದ ನ.11 ರಂದು ಜಿಲ್ಲಾ ಕೇಂದ್ರದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿಯನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಒನಕೆ ಓಬವ್ವ ಜಯಂತಿ ಆಚರಿಸುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನವೆಂಬರ್ 11 ರಂದು ಬೆಳಿಗ್ಗೆ 9ಕ್ಕೆ ನಗರದ ಹೊಳಲ್ಕೆರೆ ರಸ್ತೆಯ ಗೌರಸಮುದ್ರ ಮಾರಮ್ಮ ದೇಗುಲದ ಸಮೀಪದಿಂದ ಒನಕೆ ಓಬವ್ವ ಭಾವಚಿತ್ರದ ಮೆರವಣಿಗೆಯು ಪ್ರಾರಂಭವಾಗಿ ಸಂಗೋಳ್ಳಿ ರಾಯಣ್ಣ ವೃತ್ತ, ಗಾಂಧಿವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಒನಕೆ ಓಬವ್ವ ವೃತ್ತ, ಮದಕರಿ ನಾಯಕ ವೃತ್ತದ ಮೂಲಕ ತರಾಸು ರಂಗಮಂದಿರ ತಲುಪಲಿದೆ. ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳು ಭಾಗವಹಿಸಲಿವೆ. ಬೆಳಿಗ್ಗೆ 11ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಎಲ್ಲ ಸಮಾಜದವರು ಪಾಲ್ಗೊಳ್ಳಬೇಕು ಎಂದರು.ಚಿತ್ರದುರ್ಗ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ವೀರ ವನಿತೆ ಒನಕೆ ಓಬವ್ವ ಹೆಸರು ನಾಮಕರಣ ಮಾಡುವಂತೆ ಮಾಜಿ ರಾಜ್ಯಸಭಾ ಸದಸ್ಯ ಎಚ್.ಹನುಮಂತಪ್ಪ ಮನವಿ ಮಾಡಿದರು.

ಛಲವಾದಿ ಮಹಾಸಂಸ್ಥಾನ ಗುರಪೀಠ ಟ್ರಸ್ಟ್‍ನ ಬಸವ ನಾಗಿದೇವ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಸಮಾಜದ ಮುಖಂಡ ಎಚ್.ಸಿ.ನಿರಂಜನಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಮತ್ತಿತರರಿದ್ದರು.