ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಎಡಿಸಿ ಶಿವಾನಂದ ಅಧಿಕಾರಿಗಳಿಗೆ ಸೂಚನೆ

| Published : Oct 23 2024, 12:42 AM IST

ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಎಡಿಸಿ ಶಿವಾನಂದ ಅಧಿಕಾರಿಗಳಿಗೆ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಯಚೂರಿನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ರಾಯಚೂರು

ಕರ್ನಾಟಕದ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ನಿಟ್ಟಿನಲ್ಲಿ ಹಾಗೂ ಕರ್ನಾಟಕ ಸಂಭ್ರಮ 50ರ ಅಂಗವಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ ಹಾಗೂ ವೈಭವಯುತವಾಗಿ ಮತ್ತು ಅರ್ಥಪೂರ್ಣವಾಗಿ ಜಿಲ್ಲಾಡಳಿತ ವತಿಯಿಂದ ಆಚರಿಸಲು ಪೂರ್ವಸಿದ್ಧತೆ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಥಳೀಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳ ವಾರ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಾಡು-ನುಡಿ ಮತ್ತು ಸಾಂಸ್ಕೃತಿಕ ಮೆರವಣಿಗೆ, ನಾಡು-ನುಡಿಯ ಬಿಂಬಿಸುವ ನೃತ್ಯ ಪ್ರದರ್ಶನ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅಲ್ಲದೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾರಂಭಕ್ಕೆ ಅಗತ್ಯವಾದ ಆಸನ ವ್ಯವಸ್ಥೆ, ಧ್ವನಿವರ್ಧಕ ವ್ಯವಸ್ಥೆ, ಧ್ವಜಾರೋಹಣ ವ್ಯವಸ್ಥೆ, ಪಥ ಸಂಚಲನ ಹಾಗೂ ವಿದ್ಯಾರ್ಥಿಗಳಿಂದ ನಾಡು-ನುಡಿ ಬಿಂಬಿಸುವ ಸಾಮೂಹಿಕ ನೃತ್ಯ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲು ಸೂಚಿಸಿದರು.

ಅಂದು ಬೆಳಗ್ಗೆ 7.30 ಗಂಟೆಗೆ ನಗರದ ಕರ್ನಾಟಕ ಸಂಘದಲ್ಲಿ ಭುವನೇಶ್ವರಿ ಮಾತೆಯ ಪೂಜೆ ಕಾರ್ಯಾಕ್ರಮ ನಂತರ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣಕ್ಕೆ ಸಾರ್ವಜನಿಕರು ಬಂದು ಸೇರಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು. ಬೆಳಿಗ್ಗೆ 9ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಳ್ಳಬೇಕು.

ಧ್ವಜಾರೋಹಣ ಕಾರ್ಯಕ್ರಮದ ಸಿದ್ಧತೆ, ಮೆರವಣಿಗೆ, ವೇದಿಕೆ ಅಲಂಕಾರ ಸೇರಿದಂತೆ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಎಲ್ಲವನ್ನೂ ಮುಂಜಾಗ್ರತಾ ಕ್ರಮವಾಗಿ ಸಿದ್ಧತೆಕೈಗೊಳ್ಳಲು ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳನ್ನು ಒಳಗೊಂಡ 9 ಸಮಿತಿಗಳನ್ನು ರಚಿಸಲಾಗಿದೆ ಎಂದರು.

ಈ ವೇಳೆ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು ಮಾತನಾಡಿ, ಕನ್ನಡ ಪರ ಸೇವೆ ಸಲ್ಲಿಸಿದವರಿಗೆ ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ, ಗೌರವಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಡಿವೈಎಸ್ಪಿ ಪ್ರಮಾನಂದಾ ಘೋಡಿಗೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ್ ನಾಯಕ, ಕಾರ್ಮಿಕ ಇಲಾಖೆಯ ಅಧಿಕಾರಿ ಭಾರತಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಯ ಮುಖಂಡರು ಸಭೆಯಲ್ಲಿ ಇದ್ದರು.ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ಸಹಕರಿಸಿ: ತಹಶೀಲ್ದಾರ್ ಮಲ್ಲಪ್ಪ ಕೆ. ಯರಗೋಳ

ಮಸ್ಕಿ: ನ.1ರಂದು ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಬೇಕು ಎಂದು ತಹಶೀಲ್ದಾರ್ ಮಲ್ಲಪ್ಪ ಕೆ. ಯರಗೋಳ ಕರೆ ನೀಡಿದರು.ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಕರೆಯಲಾಗಿದ್ದ ಅಧಿಕಾರಿಗಳ ಹಾಗೂ ಕನ್ನಡ ಪರ ಸಂಘಟನೆಗಳ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ವಿವಿಧ ಸರ್ಕಾರಿ ಕಚೇರಿಗಳ ಮೇಲೆ ಹಾಗೂ ಶಾಲಾ ಕಾಲೇಜುಗಳಲ್ಲಿ ಬೆಳಿಗ್ಗೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ತಿಳಿಸಿದರು.ನಂತರ ಕೇಂದ್ರ ಶಾಲಾ ಆವರಣದಿಂದ ಕನ್ನಡಾಂಬೆಯ ಭಾವಚಿತ್ರದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ, ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರುವಿಹಾಳ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಎಲ್ಲರೂ ಪಾಲ್ಗೊಳ್ಳಲಿದ್ದಾರೆ ಎಂದರು.ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ದೊಡ್ಡಪ್ಪ ಮುರಾರಿ ದಾನಪ್ಪ ನಿಲೋಗಲ್, ವಿರೇಶ್ ಪಾಟೀಲ್, ಕನ್ನಡ ಪರ ಸಂಘಟನೆಗಳ ಮುಖಂಡರಾದ ದುರ್ಗರಾಜ ವಟಗಲ್, ಆರ್ ಕೆ ನಾಯಕ್, ಕಿರಣ್ ಮುರಾರಿ, ಬಸವರಾಜ್ ಉದ್ಭಳ್, ಮಲ್ಲಿಕ್ ಕೋಟಾರಿ ,ಮೌನೇಶ್, ಮುಖಂಡರು ಪಾಲ್ಗೊಂಡಿದ್ದರು.