ತಾಲೂಕು ಆಡಳಿತದಿಂದ ಜ.26 ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಶಿಸ್ತುಬದ್ಧವಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ತಹಸೀಲ್ದಾರ್ ನಿಂಗಣ್ಣ ಬಿರಾದಾರ ಸೂಚಿಸಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ತಾಲೂಕು ಆಡಳಿತದಿಂದ ಜ.26 ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಶಿಸ್ತುಬದ್ಧವಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ತಹಸೀಲ್ದಾರ್ ನಿಂಗಣ್ಣ ಬಿರಾದಾರ ಸೂಚಿಸಿದರು.

ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸೋಮವಾರ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆಯ ಪಟ್ಟಣದ ಶಾಸಕರ ಮಾದರಿ ಶಾಲಾ ಆವರಣ ಸ್ವಚ್ಛತೆ, ವೇದಿಕೆ ಅಲಂಕಾರ, ಕುಡಿಯುವ ನೀರು ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ವಿವಿಧ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಹಾಗೂ ಸಮನ್ವಯದಿಂದ ಕೈಗೊಳ್ಳಬೇಕು ಎಂದು ಸೂಚಿಸಿದರು.ಸರ್ಕಾರಿ ಕಚೇರಿಗಳು, ಪಟ್ಟಣದ ವೃತ್ತಗಳಿಗೆ ದೀಪಾಲಂಕಾರ, ಸನ್ಮಾನಿತರಿಗೆ, ಮಾಧ್ಯಮದವರಿಗೆ, ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ, ಶಿಷ್ಟಾಚಾರ ಅನುಸಾರ ಆಮಂತ್ರಣ ಪತ್ರಿಕೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಮಾಡಬೇಕು ಎಂದರು. ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ವೇದಿಕೆ ಸಿದ್ಧತೆ ಒಳಗೊಂಡಂತೆ ಗಣರಾಜ್ಯೋತ್ಸವದ ವಿವಿಧ ಸಿದ್ಧತೆಗಳ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಸಿದ್ಧತೆ ಕೈಗೊಳ್ಳುವಂತೆ ಸಲಹೆ ನೀಡಿದರು. ವಿವಿಧ ಇಲಾಖೆಗಳ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ವಿವಿಧ ಸಂಘಟನೆಗಳ ಮುಖಂಡರುಗಳಾದ ಕಾಶಿನಾಥ ತಳಕೇರಿ, ಜಾನು ಗುಡಿಮನಿ, ಬಸವರಾಜ ತಳಕೇರಿ, ರಾಘವೇಂದ್ರ ಗುಡಿಮನಿ, ಸಂಪತ ಜಮಾದಾರ, ಸಿ.ಆರ್.ಪಿ ವಿಜಯಲಕ್ಷ್ಮಿ ನವಲಿ ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದರು.ಇದೇ ಸಂದರ್ಭದಲ್ಲಿ ಪಪಂ ಮುಖ್ಯಾಧಿಕಾರಿ ಅಪ್ರೋಜ್‌ ಅಹ್ಮದ್‌ ಪಟೇಲ, ತಾಪಂ ಇಒ ಭಾರತಿ ಚೆಲುವಯ್ಯ, ಸಿಂದಗಿ ಬಿಇಒ ಎಂ.ಬಿ.ಯಡ್ರಾಮಿ, ಪಿಡಬ್ಲ್ಯೂಡಿ ಎಇಇ ಅರುಣಕುಮಾರ ವಡಿಗೇರಿ, ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ಅಶೋಕ ಹೆಗಡೆ, ಸಿಂದಗಿ ಎಪಿಎಂಸಿ ಕಾರ್ಯದರ್ಶಿ ಬಿ.ಎಲ್.ಜುಮ್ಮನಾಳ, ಕೃಷಿ ಇಲಾಖೆಯ ಶರಣಗೌಡ ಬಿರಾದಾರ, ಪ್ರಾ.ಆ ಕೇಂದ್ರದ ಮುಖ್ಯ ವೈದ್ಯಾಧಿಕಾರಿಗಳಾದ ಸಂದೀಪ ಕಡ್ಲೇವಾಡ, ಅ.ದಾ.ಎಡಿ ಎ.ಎಸ್.ಡೋಣೂರ, ಪ್ರಾ.ಶಾ.ಸ.ನೌ ಸಂಘದ ಅಧ್ಯಕ್ಷರಾದ ಸಿ.ಬಿ.ಗಡಗಿ, ಶಿಕ್ಷಕರ ಸಂಘದ ಅಧ್ಯಕ್ಷರಾದ ಎ.ಎಚ್.ವಾಲಿಕಾರ, ಕಸಾಪ ಮಾಜಿ ಅಧ್ಯಕ್ಷರಾದ ಜಿ.ಪಿ.ಬಿರಾದಾರ ಸೇರಿದಂತೆ ಪಟ್ಟಣದ ಪ್ರಮುಖರು, ಗಣ್ಯರು, ವಿವಿಧ ಸಂಘಟನೆ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕರಾದ ಸುರೇಶ ಮ್ಯಾಗೇರಿ ಸ್ವಾಗತಿಸಿ, ವಂದಿಸಿದರು.