ಸಾರಾಂಶ
ಕ್ಷೇತ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪರನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಶಾಸಕ ಎಚ್.ವಿ.ವೆಂಕಟೇಶ್ ಹೇಳಿದರು.
ಕನ್ನಡಪ್ರಭ ವಾರ್ತೆ ಪಾವಗಡ
ಕ್ಷೇತ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪರನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಶಾಸಕ ಎಚ್.ವಿ.ವೆಂಕಟೇಶ್ ಹೇಳಿದರು.ಪಟ್ಟಣದಲ್ಲಿ ಮಾಜಿ ಸಚಿವ ವೆಂಕಟರಮಣಪ್ಪ ನೇತೃತ್ವದಲ್ಲಿ ಶನಿವಾರ ನಡೆದ ರೋಡ್ ಶೋದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ, ಗ್ಯಾರಂಟಿ ಯೋಜನೆಯ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಮನೆಮನೆಗೆ ತೆರಳಿ ಮತಯಾಚಿಸುವ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ಎನ್. ಚಂದ್ರಪ್ಪರನ್ನು ಗೆಲುವಿಗೆ ಕಾರ್ಯಕರ್ತ ಶ್ರಮಿಸಬೇಕು ಎಂದರು.
ಇದಕ್ಕೂ ಮುನ್ನ ಶಾಸಕ ಎಚ್.ವಿ.ವೆಂಕಟೇಶ್ ಹಾಗೂ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ನಗರದ ಟೋಲ್ ಗೇಟ್‌ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಪುರಸಭೆ ಮಾಜಿ ಅಧ್ಯಕ್ಷ ಗುರ್ರಪ್ಪ, ಜಿಪಂ ಮಾಜಿ ಸದಸ್ಯ ಕೋಟೆ ಪ್ರಭಾಕರ್, ರೈತ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ, ಸಮಾಜ ಸೇವಕರ ವೆಂಕಟಮ್ಮನಹಳ್ಳಿ ಬತ್ತಿನೇನಿ ನಾನಿ, ವಕೀಲ ವೆಂಕಟರಾಮರೆಡ್ಡಿ, ಪುರಸಭೆ ಸದಸ್ಯರಾದ ಪಿ.ಎಚ್.ರಾಜೇಶ್, ತೆಂಗಿನಕಾಯಿ ರವಿ, ಷಾಬಾಬು, ಉಷಾರಾಣಿ, ಸುಮಾ ಅನಿಲ್, ಐಟಿ ಘಟಕದ ಅಧ್ಯಕ್ಷ ಪಾಪಣ್ಣ, ಹನುಮೇಶ್, ಕಿರಣ್ ದೇವರಾಜ್, ಕಾರ್ಯಕರ್ತರು ಭಾಗವಹಿಸಿದ್ದರು.