ಶುದ್ಧ ನೀರು ಕುಡಿಯಲು ಸಾರ್ವಜನಿಕರಿಗೆ ಅರಿವು ಮೂಡಿಸಿ

| Published : Jun 27 2024, 01:08 AM IST

ಶುದ್ಧ ನೀರು ಕುಡಿಯಲು ಸಾರ್ವಜನಿಕರಿಗೆ ಅರಿವು ಮೂಡಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಕನಕಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಕೊಳವೆಬಾವಿ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆ ವರದಿ ನೀಡಿದ್ದು ಶುದ್ಧ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಗ್ರಾಪಂ ಸದಸ್ಯರಿಗೆ ತಿಳಿವಳಿಕೆ ನೀಡಬೇಕು ಎಂದು ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ತಿಳಿಸಿದರು.

ಕನಕಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಕೊಳವೆಬಾವಿ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆ ವರದಿ ನೀಡಿದ್ದು ಶುದ್ಧ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಗ್ರಾಪಂ ಸದಸ್ಯರಿಗೆ ತಿಳಿವಳಿಕೆ ನೀಡಬೇಕು ಎಂದು ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ತಿಳಿಸಿದರು.

ತಾಲೂಕಿನ ನಾರಾಯಣಪುರ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂನೂರು, ಮುನೇಶ್ವರನ ದೊಡ್ಡಿ, ಕೆಬ್ಬಳ್ಳಿ ಗ್ರಾಮದ ಕೊಳವೆಬಾವಿಗಳ ನೀರನ್ನ ಸಂಗ್ರಹಿಸಿ ಆರೋಗ್ಯ ಇಲಾಖೆ ಪರೀಕ್ಷೆಗೆ ಒಳಪಡಿಸಿದಾಗ, ಆ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ನೀಡಿದೆ. ಈ ಗ್ರಾಮಗಳಲ್ಲಿ ಕೊಳವೆಬಾವಿ ನೀರನ್ನು ದಿನ ಬಳಕೆಗೆ ಮಾತ್ರ ಬಳಸಿಕೊಂಡು ಕುಡಿಯಲು ಶುದ್ಧ ನೀರನ್ನು ಬಳಸುವಂತೆ ಸಾರ್ವಜನಿಕರಿಗೆ ಸದಸ್ಯರು ತಿಳಿವಳಿಕೆ ನೀಡಬೇಕು. ಗ್ರಾಮ ಪಂಚಾಯಿತಿ ವತಿಯಿಂದ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡ ಲಾಗುವುದು ಎಂದರು.

ಸಭೆಯಲ್ಲಿ ಸದಸ್ಯರಾದ ಚಂದನ್, ಪ್ರಶಾಂತ, ರೇಣುಕಪ್ಪ, ಶಿವ ಸಿದ್ದೇಗೌಡ, ಮುನಿಯಪ್ಪ ಸೇರಿದಂತೆ ಹಲವು ಸದಸ್ಯರು ಮಾತನಾಡಿ ಪಂಪ್ ಆಪರೇಟರ್ ಮತ್ತು ಎಲೆಕ್ಟ್ರಿಷಿಯನ್ ಆಗಿ ತಾತ್ಕಾಲಿಕವಾಗಿ ಕೆಲಸ ಮಾಡುತ್ತಿರುವ ತಿಮ್ಮಯ್ಯ ಸಮರ್ಪಕವಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನೇ ಆ ಹುದ್ದೆಗೆ ನೇಮಕ ಮಾಡಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿಗೆ ವರದಿ ಸಲ್ಲಿಸುವಂತೆ ಸಲಹೆ ನೀಡಿದರು.ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಬೀಗ ಮುರಿದು ಕಳ್ಳತನ ಮಾಡಿ ಅಕ್ರಮ ಚಟುವಟಿಕೆ ನಡೆಸಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ದೂರನ್ನು ನೀಡುವಂತೆ ತಿಳಿಸಿದರು.

ಅನಧಿಕೃತವಾಗಿ ನಡೆಯುತ್ತಿರುವ ಹೋಂ ಸ್ಟೇಗಳಿಗೆ ನೋಟಿಸ್ ಕೊಟ್ಟು ತೆರಿಗೆ ವಸೂಲಿ ಮಾಡುವುದು, ಕೆರೆಯಲ್ಲಿ ಮಣ್ಣು ತೆಗೆಯಲೂ ನಿಯಮಾನುಸಾರ ಶುಲ್ಕ ಪಡೆದು ಅನುಮತಿ ಕೊಡಿ ಪಂಚಾಯ್ತಿಗೆ ಹೆಚ್ಚಿನ ತೆರಿಗೆ ಬರಲಿದೆ. ಕೆಲವು ಗ್ರಾಮಗಳಲ್ಲಿ ಕುಡಿಯಲು ಕೊಳವೆ ಬಾವಿ ನೀರನ್ನೆ ಅವಲಂಬಿಸಿದ್ದಾರೆ. ಕೆಲವು ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳಿಲ್ಲ ಕುಡಿಯಲು ಯೋಗ್ಯವಲ್ಲದ ಕೊಳವೆಬಾವಿ ನೀರನ್ನು ಶುದ್ಧೀಕರಿಸಿ ಉಪಯೋಗಿಸಬಹುದೇ ಅಥವಾ ಬೇರೆ ಯಾವ ಮಾರ್ಗವಿದೆ ಅದರ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾಹಿತಿಯನ್ನು ಪಡೆದು ಕೊಂಡು ಆ ಗ್ರಾಮಗಳಲ್ಲಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಕೊಡಬೇಕು ಎಂದು ಅಧಿಕಾರಿಗಳಿಗೆ ಸದಸ್ಯರು ಸಲಹೆ ಸೂಚನೆ ನೀಡಿದರು.

ಸದಸ್ಯರ ಸಲಹೆ ಹಾಗೂ ಸೂಚನೆಗಳಿಗೆ ಉತ್ತರಿಸಿದ ಪಿಡಿಒ ಮಹಾಂತೇಶ್, ಹುಲಿಬೆಲೆ ಗ್ರಾಮದ ಬಳಿ ಅನಧಿಕೃತ ಹೋಂ ಸ್ಟೇಗೆ ಸಂಬಂಧಪಟ್ಟಂತೆ ಈಗಾಗಲೇ ನೋಟಿಸ್ ಕೊಟ್ಟು ಪಂಚಾಯಿತಿ ಅನುಮತಿ ಪಡೆಯುವಂತೆ ಹಾಗೂ ಪ್ರವಾಸೋದ್ಯಮ ಇಲಾಖೆಗೂ ಪತ್ರ ಬರೆಯಲಾಗಿದೆ. ಕೆರೆ ನಿರ್ವಹಣಾ ಸಮಿತಿ ರಚನೆ ಮಾಡಿ ಪಂಚಾಯಿತಿಗೆ ಶುಲ್ಕವನ ಕಟ್ಟಿಸಿಕೊಂಡು ಕೆರೆಯಲ್ಲಿ ಮಣ್ಣು ತೆಗೆಯಲು ಅನುಮತಿ ಕೊಡಲು ಅವಕಾಶವಿದೆ. ಇದರ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವಂತೆ ಸದಸ್ಯರಿಗೆ ತಿಳಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಾಮುಂಡಿ, ಉಪಾಧ್ಯಕ್ಷ ಹಾಗೂ ಸದಸ್ಯರು ಅಧಿಕಾರಿಗಳು ಸಿಬ್ಬಂದಿ ಗಳು ಉಪಸ್ಥಿತರಿದ್ದರು.

ಕೆ ಕೆ ಪಿ ಸುದ್ದಿ:03

ಕಸಬಾ ಹೋಬಳಿಯ ನಾರಾಯಣಪುರ ಗ್ರಾಪಂ ಅಧ್ಯಕ್ಷ ಚಾಮುಂಡಿ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.