ತೆರಿಗೆ ಸಂಗ್ರಹಿಸಲು ಪ್ರಾಮಾಣಿಕವಾಗಿ ಶ್ರಮಿಸಿ: ಜಿಪಂ ಉಪಕಾರ್ಯದರ್ಶಿ ಸೂಚನೆ

| Published : Sep 24 2024, 01:56 AM IST

ತೆರಿಗೆ ಸಂಗ್ರಹಿಸಲು ಪ್ರಾಮಾಣಿಕವಾಗಿ ಶ್ರಮಿಸಿ: ಜಿಪಂ ಉಪಕಾರ್ಯದರ್ಶಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾಗವಾಡ ತಾಲೂಕಿನ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿಯಲ್ಲಿ ಬಾಕಿಯಿರುವ ತೆರಿಗೆ ಸಂಗ್ರಹಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ನರೇಗಾ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸಿಬೇಕೆಂದು ಜಿಪಂ ಉಪಕಾರ್ಯದರ್ಶಿ (ಅಭಿವೃದ್ಧಿ) ಬಸವರಾಜ ಅಡವಿಮಠ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಕಾಗವಾಡ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿಯಲ್ಲಿ ಬಾಕಿಯಿರುವ ತೆರಿಗೆ ಸಂಗ್ರಹಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ನರೇಗಾ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸಿಬೇಕೆಂದು ಜಿಪಂ ಉಪಕಾರ್ಯದರ್ಶಿ (ಅಭಿವೃದ್ಧಿ) ಬಸವರಾಜ ಅಡವಿಮಠ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಸೆ.23ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕಿನ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಕಳೆದ ಸಭೆಯಲ್ಲಿ ತೆರಿಗೆ ಸಂಗ್ರಹ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಈಗ ತೆರಿಗೆ ಸಂಗ್ರಹಣೆಯಲ್ಲಿ ಪ್ರಗತಿಯಾಗಿದ್ದು, ಒಂದೆರಡು ಗ್ರಾಮ ಪಂಚಾಯತಿಗಳು ಮಾತ್ರ ಇನ್ನೂ ತೆರಿಗೆ ಸಂಗ್ರಹ ಬಾಕಿ ಉಳಿಸಿಕೊಂಡಿವೆ. ಕಟ್ಟನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಕಳೆದ ವರ್ಷದ ಖರ್ಚು ವೆಚ್ಚಗಳ ಅನುಗುಣವಾಗಿ ಈ ವರ್ಷದ ಕ್ರಿಯಾಯೋಜನೆ ರೂಪಿಸಿದ್ದು, ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.

ಪಿಡಿಒಗಳು ನರೇಗಾ ಯೋಜನೆಯಲ್ಲಿ ಹೆಚ್ಚು ಕೆಲಸಗಳ ಕ್ರಿಯಾಯೋಜನೆ ಸಿದ್ಧಪಡಿಸಿ, ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕು. ನಿಗದಿತ ಅವಧಿಯಲ್ಲಿ ಕೂಲಿ ಹಣ ಪಾವತಿಯಾಗುವಂತೆ ನಿಗಾ ವಹಿಸಬೇಕು. ನಿರ್ಲಕ್ಷ್ಯ ತೋರಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ತಾಪಂ ಇಒ ವೀರಣ್ಣ ವಾಲಿ, ಸಿಡಿಪಿಒ ಸಂಜೀವಕುಮಾರ ಸದಲಗಿ, ರವೀಂದ್ರ ಮುರಗಾಲಿ, ಡಾ.ಬಸಗೌಡ ಕಾಗೆ, ಬಿ.ಜೆ.ಕಾಂಬಳೆ, ದುರ್ಯೋಧನ ಮಾಳಿ, ಬಸವರಾಜ ಯಾದವಾಡ, ಪ್ರಶಾಂತ ಗಂಗಧರ, ಮೈಬೂಬ್‌ ಕೊತ್ವಾಲ್, ಎ.ಡಿ. ಅನ್ಸಾರಿ ಸೇರಿದಂತೆ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು, ಗ್ರಾಮ ಅಭಿವೃದ್ಧಿ ಅಧಿಕಾರಿಗಳು ಇದ್ದರು.