ವಿದ್ಯಾರ್ಥಿ ಜೀವನ ಆದರ್ಶಮಯವಾಗಲಿ: ನ್ಯಾಯಾಧೀಶ ರವಿ ಎಂ. ನಾಯ್ಕ

| Published : Oct 30 2024, 12:45 AM IST

ವಿದ್ಯಾರ್ಥಿ ಜೀವನ ಆದರ್ಶಮಯವಾಗಲಿ: ನ್ಯಾಯಾಧೀಶ ರವಿ ಎಂ. ನಾಯ್ಕ
Share this Article
  • FB
  • TW
  • Linkdin
  • Email

ಸಾರಾಂಶ

ಮೆಟ್ರಿಕ್ ನಂತರದ ಸಮಯದಲ್ಲಿ ವಿದ್ಯಾರ್ಥಿಗಳು ಹಾದಿ ತಪ್ಪುವ ಸಮಯವಾಗಿದ್ದು, ಈ ಸಂದರ್ಭದಲ್ಲಿ ನೀವು ಯಾರ ಕೈಯಲ್ಲಿನ ಆಯುಧವಾಗದೇ ಸ್ವಂತ ಬುದ್ಧಿಯನ್ನು ಉಪಯೋಗಿಸಬೇಕು.

ಭಟ್ಕಳ: ಪ್ರತಿಭೆಗಳು ಕೇವಲ ಒಂದೇ ರಂಗಕ್ಕೆ ಸೀಮಿತವಾಗದೇ ಪ್ರತಿಯೊಂದು ರಂಗದಲ್ಲಿಯೂ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಯಾವುದೇ ದುಷ್ಟ ಚಟುವಟಿಕೆಗಳಲ್ಲಿ ಹಾಗೂ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದೇ ವಿದ್ಯಾರ್ಥಿ ಜೀವನವನ್ನು ಆದರ್ಶಮಯವಾಗಿಸಿಕೊಳ್ಳಬೇಕು ಎಂದು ನಿವೃತ್ತ ಜಿಲ್ಲಾ ನ್ಯಾಯಾಧೀಶ ರವಿ ಎಂ. ನಾಯ್ಕ ತಿಳಿಸಿದರು.

ಇಲ್ಲಿನ ನಾಮಧಾರಿ ಸಮಾಜದ ಗುರುಮಠ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ವತಿಯಿಂದ ವರ್ಷಂಪ್ರತಿ ನೀಡುವ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮೆಟ್ರಿಕ್ ನಂತರದ ಸಮಯದಲ್ಲಿ ವಿದ್ಯಾರ್ಥಿಗಳು ಹಾದಿ ತಪ್ಪುವ ಸಮಯವಾಗಿದ್ದು, ಈ ಸಂದರ್ಭದಲ್ಲಿ ನೀವು ಯಾರ ಕೈಯಲ್ಲಿನ ಆಯುಧವಾಗದೇ ಸ್ವಂತ ಬುದ್ಧಿಯನ್ನು ಉಪಯೋಗಿಸಬೇಕು ಎಂದ ಅವರು, ಪಾಲಕರೂ ಅಂತಹ ಸಮಯದಲ್ಲಿ ತಮ್ಮ ಮಕ್ಕಳ ಕುರಿತು ಕಾಳಜಿ ವಹಿಸಬೇಕು. ಸಮಾಜದ ಉನ್ನತ ಹುದ್ದೆಯಲ್ಲಿರುವವರು ಸದಾ ಸಮಾಜದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುರುಮಠದ ಅಧ್ಯಕ್ಷ ಅರುಣ ನಾಯ್ಕ ವಹಿಸಿದ್ದರು. ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಮಂಜುನಾಥ ನಾಯ್ಕ, ಸಮಾಜದ ಗೌರವಾಧ್ಯಕ್ಷ ಕೃಷ್ಣ ನಾಯ್ಕ ಆಸರಕೇರಿ ಮಾತನಾಡಿದರು. ಬಳಿಕ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಮಾಜದ ಉಪಾಧ್ಯಕ್ಷ ಎಂ.ಕೆ. ನಾಯ್ಕ ಉಪಸ್ಥಿತರಿದ್ದರು. ವಿಶ್ರಾಂತ ಜಿಲ್ಲಾ ನ್ಯಾಯಾಧೀಶರಾದ ರವಿ ಎಂ. ನಾಯ್ಕ ನಾಯ್ಕ ಹಾಗೂ ಉಪನ್ಯಾಸಕ ಮಂಜುನಾಥ ನಾಯ್ಕ ಅವರನ್ನು ಗೌರವಿಸಲಾಯಿತು.

ಮಂಜುನಾಥ ನಾಯ್ಕ ಪ್ರಾರ್ಥಿಸಿದರು. ಗುರುಮಠದ ಕಾರ್ಯದರ್ಶಿ ಡಿ.ಎಲ್. ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಂಗಾಧರ ನಾಯ್ಕ ಹಾಗೂ ನಾರಾಯಣ ನಾಯ್ಕ ನಿರ್ವಹಿಸಿದರು.