ಮಕ್ಕಳ ಮನಸ್ಥಿತಿಯರಿತು ಶಿಕ್ಷಕ ಪೋಷಕವರ್ಗ ಶಿಕ್ಷಣ ನೀಡಿದಾಗ ಮಾತ್ರ ಮಕ್ಕಳ ಉತ್ತಮ ಪ್ರಜೆಗಳಾಗಿ ರೂಪಿಸಲು ಸಾಧ್ಯ. ಸಾಕಷ್ಟು ಪ್ರತಿಭಾವಂತ ಮಕ್ಕಳು ಇದ್ದಾರೆ. ಅವರು ಅವಕಾಶ ವಂಚಿತರಾಗದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಶಿಕ್ಷಕರದಾಗಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ರಿಪ್ಪನ್‍ಪೇಟೆ: ಮಕ್ಕಳ ಮನಸ್ಥಿತಿಯರಿತು ಶಿಕ್ಷಕ ಪೋಷಕವರ್ಗ ಶಿಕ್ಷಣ ನೀಡಿದಾಗ ಮಾತ್ರ ಮಕ್ಕಳ ಉತ್ತಮ ಪ್ರಜೆಗಳಾಗಿ ರೂಪಿಸಲು ಸಾಧ್ಯ. ಸಾಕಷ್ಟು ಪ್ರತಿಭಾವಂತ ಮಕ್ಕಳು ಇದ್ದಾರೆ. ಅವರು ಅವಕಾಶ ವಂಚಿತರಾಗದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಶಿಕ್ಷಕರದಾಗಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.ಸಮೀಪದ ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಪ್ರೋತ್ಸಾಹಿಸುತ್ತಿದೆ. ಅಲ್ಲದೆ ಹಳ್ಳಿಯಲ್ಲಿನ ಶಾಲೆಗಳಲ್ಲಿ ಮಕ್ಕಳು ಕಲಿತು ಸರ್ಕಾರಿ ಉದ್ಯೋಗದಲ್ಲಿದ್ದಾರೆಂಬುದಕ್ಕೆ ಈ ಶಾಲೆಯಲ್ಲಿ ವ್ಯಾಸಂಗ ಮಾಡಿದವರು ಸರ್ಕಾರಿ ಉದ್ಯೋಗಕ್ಕೆ ಸೇರಿ ನಿವೃತ್ತಿ ಹೊಂದಿರುತ್ತಾರೆ. ಸಣ್ಣ ಗುಡಿಸಲಲ್ಲಿ ಆರಂಭವಾದ ಕಿರಿಯ ಪ್ರಾಥಮಿಕ ಶಾಲೆ ಕಾಲ ಬದಲಾದಂತೆ ಕೊಠಡಿಗಳನ್ನು ನಿರ್ಮಿಸಿ ಉತ್ತಮ ಶಿಕ್ಷಕರನ್ನು ವರ್ಗಾವಣೆ ಮಾಡಿ ಅವರ ಇಚ್ಛಾಶಕ್ತಿಯ ಫಲವೆ ಇಂದು ಶಾಲೆ ಸುವರ್ಣಮಹೋತ್ಸವವನ್ನು ಅಚರಿಸಿಕೊಳ್ಳುತ್ತಿರುವುದು ಸಂತೋಷ ಎಂದ ಅವರು, ಖಾಸಗಿ ಶಾಲೆಗಳ ಭರಾಟೆಯಲ್ಲಿಯೂ ಹಳ್ಳಿಯ ಶಾಲೆಗಳು ಎಲ್ಲಿ ಮುಚ್ಚುತ್ತವೆ ಎಂಬ ಗೊಂದಲದಲ್ಲಿದ್ದರೂ ಶಿಕ್ಷಕರ ಮತ್ತು ಪೋಷಕರ ಗ್ರಾಮಸ್ಥರ ಪರಿಶ್ರಮದಿಂದ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಸಹ ಹೆಚ್ಚು ಇದೆ ಎಂದು ಹೇಳಿ ಶಿಕ್ಷಕರ ಕಾರ್ಯವನ್ನು ಪ್ರಶಂಸಿಸಿದರು. ಹಿಂಡ್ಲಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಆಧ್ಯಕ್ಷ ಎಚ್.ಕೆ.ದೇವರಾಜ್ ಆಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಉಪಾಧ್ಯಕ್ಷೆ ಪವಿತ್ರ ಸಂದೀಪ, ಕೋಡೂರು ಗ್ರಾಪಂ ಅಧ್ಯಕ್ಷ ಜಯಪ್ರಕಾಶ ಶೆಟ್ಟರು, ಉಪಾಧ್ಯಕ್ಷ ಸುಧಾಕರ್, ಗ್ರಾಪಂ ಸದಸ್ಯರಾದ ಚಂದ್ರಕಲಾ, ಅನ್ನಪೂರ್ಣ, ಉಮೇಶಕಲಗೋಡು, ಸುನಂದ ನಾಗರಾಜ್, ಶ್ಯಾಮಲಶೇಖರಪ್ಪ, ಯೋಗೇಂದ್ರ, ರೇಖಾ ನಾಗರಾಜ್, ಮಂಜಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಗಣೇಶ, ಶಿಕ್ಷಣ ಸಂಯೋಜಕ ಕರಿಬಸಪ್ಪ, ಪಿಡಿಒ ನಾಗರಾಜ್.ಎಸ್, ಸಿ.ಆರ್.ಪಿ.ಸಂತೋಷ, ಮುಖ್ಯಶಿಕ್ಷಕ ಲಿಂಗಪ್ಪ ಎಚ್.ಬಿ, ಸಹಶಿಕ್ಷಕ ಹನುಮಂತಪ್ಪ, ಶೇಖರಪ್ಪ, ಅಂಗನವಾಡಿ ಕಾರ್ಯಕರ್ತೆ ಶಾಂತ ಎ.ಜಿ, ಸುಕನ್ಯ ಇನ್ನಿತರರು ಹಾಜರಿದ್ದರು.ಇದೇ ವೇಳೆ ಸುವರ್ಣ ಮಹೋತ್ಸವದ ಕಾರ್ಯಕ್ರಮಕ್ಕೆ ಕೊಡುಗೆ ನೀಡಿದರನ್ನು ಮತ್ತು ಶಾಲೆಯ ಅಭಿವೃದ್ಧಿಗೆ ಶ್ರಮಿಸಿದವರನ್ನು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತರನ್ನು ಸನ್ಮಾನಿಸಲಾಯಿತು.