ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು ಬಿಜೆಪಿ ಸದಸ್ಯತಾ ಅಭಿಯಾನ-೨೦೨೪ ಕುರಿತ ಕಾರ್ಯಾಗಾರ ದ.ಕ. ಬಿಜೆಪಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆಯಿತು.ಅಭಿಯಾನಕ್ಕೆ ಚಾಲನೆ ನೀಡಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ, ಕಳೆದ ಬಿಜೆಪಿ ಸದಸ್ಯತಾ ಅಭಿಯಾನದಲ್ಲಿ ಬಿಜೆಪಿ ೧೭ ಕೋಟಿ ಸದಸ್ಯರನ್ನು ಹೊಂದುವ ಮೂಲಕ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾಗಿ ಹೊರ ಹೊಮ್ಮಿತ್ತು. ಹಾಗೇಯೇ ದ.ಕ. ಜಿಲ್ಲೆಯಲ್ಲೂ ಕಾರ್ಯಕರ್ತರು ಈ ಅಭಿಯಾನವನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.
ಅಂದಿನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಕಳೆದ ಬಾರಿಯೇ ಆನ್ ಲೈನ್ ಮುಖೇನ ಬಿಜೆಪಿ ಸದಸ್ಯತಾ ಅಭಿಯಾನವನ್ನು ದೇಶಕ್ಕೆ ಪರಿಚಯ ಮಾಡಿಸಿಕೊಟ್ಟಿದ್ದರು. ಈಗ ಪುನಃ ರಾಷ್ಟ್ರವ್ಯಾಪಿ ನಡೆಯುವ ಈ ಅಭಿಯಾನದಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡು ಹೊಸ ದಾಖಲೆಯನ್ನು ನಿರ್ಮಿಸಬೇಕು ಎಂದರು.ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ವಿಧಾನ ಪರಿಷತ್ ಸದಸ್ಯರಾದ ಹಾಗೂ ದ.ಕ. ಜಿಲ್ಲಾ ಸದಸ್ಯತಾ ಅಭಿಯಾನ ಪ್ರಭಾರಿ ಪ್ರತಾಪಸಿಂಹ ನಾಯಕ್ ಮತ್ತು ಭಾರತೀ ಶೆಟ್ಟಿ, ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ, ಉಪಮೇಯರ್ ಸುನೀತಾ, ಶಾಸಕ ಡಾ.ಭರತ್ ಶೆಟ್ಟಿ, ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಕಿಶೋರ್ ಕುಮಾರ್ ಬೊಟ್ಯಾಡಿ, ಪ್ರಮುಖರಾದ ದೇವದಾಸ ಶೆಟ್ಟಿ, ಕಸ್ತೂರಿ ಪಂಜ, ವಿಕಾಸ್ ಪುತ್ತೂರು, ನಿತೀಶ್ ಶಾಂತಿವನ, ವಿಜಯ ಕುಮಾರ್ ಶೆಟ್ಟಿ, ಮಾಜಿ ಶಾಸಕರಾದ ಬಾಲಕೃಷ್ಣ ಭಟ್, ಕೆ. ಮೋನಪ್ಪ ಭಂಡಾರಿ ಮತ್ತಿತರರಿದ್ದರು.