ಸಾರಾಂಶ
ಈಗಾಗಲೇ ನಾವು ನಮ್ಮ ಅವಧಿ ಮೂರು ವರ್ಷಗಳ ಕಾಲ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗಿದ್ದೇವೆ. ಡಿಸೆಂಬರ್ ತಿಂಗಳಲ್ಲಿಯೇ ನಮ್ಮ ಅವಧಿ ಮುಗಿದಿದ್ದು, ಮುಂದಿನ ಅವಧಿಯ ಪದಾಧಿಕಾರಿಗಳ ಆಯ್ಕೆಗಾಗಿ ಅವಕಾಶ ಮಾಡಿಕೊಡುತ್ತಿದ್ದೇವೆ. ಆಡಳಿತ ಮಂಡಳಿಯ ಸದಸ್ಯರು ಒಮ್ಮತದಿಂದ ನಿರ್ಧರಿಸುವುದರಿಂದ ಏಪ್ರಿಲ್ 13ರ ಬೆಳಗ್ಗೆ ೮ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ಹಾಸನ ನಗರದ ಕುವೆಂಪು ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಚುನಾವಣೆ ನಡೆಸಲು ಘೋಷಿಸಲಾಗಿದೆ ಎಂದರು.
ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲಾ ಮಾಜಿ ಸೈನಿಕರ ಸಮನ್ವಯ ಸಮಿತಿ ಹಾಸನ, ಸಂಘದ ನೂತನ ಆಡಳಿತ ಮಂಡಳಿಗೆ (೨೦೨೫-೨೮ ರ ಅವಧಿಗೆ) ಹಾಲಿ ಬೈಲಾ ಪ್ರಕಾರ ಚುನಾವಣೆ ನಡೆಸಲಾಗುತ್ತಿದ್ದು, ಎಲ್ಲರು ಭಾಗವಹಿಸಿ ಚುನಾವಣೆ ಯಶಸ್ವಿಗೊಳಿಸುವಂತೆ ಮಾಜಿ ಸೈನಿಕ ಸಂಘದ ಅಧ್ಯಕ್ಷ ಎಂ. ವೆಂಕಟೇಶ್ ಮತ್ತು ಉಪಾಧ್ಯಕ್ಷ ಗೋವಿಂದೇಗೌಡ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ನಾವು ನಮ್ಮ ಅವಧಿ ಮೂರು ವರ್ಷಗಳ ಕಾಲ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗಿದ್ದೇವೆ. ಡಿಸೆಂಬರ್ ತಿಂಗಳಲ್ಲಿಯೇ ನಮ್ಮ ಅವಧಿ ಮುಗಿದಿದ್ದು, ಮುಂದಿನ ಅವಧಿಯ ಪದಾಧಿಕಾರಿಗಳ ಆಯ್ಕೆಗಾಗಿ ಅವಕಾಶ ಮಾಡಿಕೊಡುತ್ತಿದ್ದೇವೆ. ಆಡಳಿತ ಮಂಡಳಿಯ ಸದಸ್ಯರು ಒಮ್ಮತದಿಂದ ನಿರ್ಧರಿಸುವುದರಿಂದ ಏಪ್ರಿಲ್ 13ರ ಬೆಳಗ್ಗೆ ೮ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ಹಾಸನ ನಗರದ ಕುವೆಂಪು ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಚುನಾವಣೆ ನಡೆಸಲು ಘೋಷಿಸಲಾಗಿದೆ ಎಂದರು.
ಜಿಲ್ಲಾ ಮಾಜಿ ಸೈನಿಕರ ಸಮನ್ವಯ ಸಮಿತಿಯ ಸದಸ್ಯರೆಲ್ಲರೂ ಸಹಕರಿಸಿ ಚುನಾವಣೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು. ಚುನಾವಣಾ ನೋಟಿಸ್ ತಲುಪದೇ ಇರುವ ಸದಸ್ಯರೆಲ್ಲರಿಗೂ ಈ ನೋಟಿಸ್, ಸಂಘದ ವಾಟ್ಸ್ ಆ್ಯಪ್ ಗ್ರೂಪಿನಲ್ಲಿ ಕಳುಹಿಸಿರುವ ಸಂದೇಶವೇ ಅಂತಿಮ ಎಂದು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು. ಮುಂದೆ ಮಾಜಿ ಸೈನಿಕರಿಗೆ ನಿವೇಶನ ಸಿಗುವ ನಿಟ್ಟಿನಲ್ಲಿ ಸಂಘ ಕಾರ್ಯಪ್ರವೃತ್ತರಾಗುತ್ತದೆ ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಗೋವಿಂದೇಗೌಡ, ಖಜಾಂಚಿ ಬಾಲಕೃಷ್ಣ, ಸಂಘಟನಾ ಕಾರ್ಯದರ್ಶಿ ಎಚ್.ಎಸ್. ರಮೇಶ್, ನಿರ್ದೇಶಕ ಮಂಜೇಗೌಡ, ಅರಸೀಕೆರೆ ನಿರ್ದೇಶಕ ಮಹೇಶ್, ಇತರರು ಉಪಸ್ಥಿತರಿದ್ದರು.