೨೮ಕ್ಕೆ ನಡೆವ ಉದ್ಯೋಗ ಮೇಳ ಯಶಸ್ವಿಗೊಳಿಸಿ: ಸಿಇಒ ಕೀರ್ತನಾ

| Published : Feb 17 2025, 12:32 AM IST

ಸಾರಾಂಶ

ಚಿಕ್ಕಮಗಳೂರು, ಜಿಲ್ಲೆಯಲ್ಲಿ ಬೃಹತ್ ಮಟ್ಟದಲ್ಲಿ ಫೆ.೨೮ರಂದು ಉದ್ಯೋಗ ಮೇಳ ನಡೆಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಎಲ್ಲ ಇಲಾಖೆಗಳು ಸೇರಿದಂತೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಉದ್ಯೋಗ ಮೇಳ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ ಹೇಳಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೌಶಲ್ಯ ಸಮಿತಿ ಸಭೆಯಲ್ಲಿ ಮಾಹಿತಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಜಿಲ್ಲೆಯಲ್ಲಿ ಬೃಹತ್ ಮಟ್ಟದಲ್ಲಿ ಫೆ.೨೮ರಂದು ಉದ್ಯೋಗ ಮೇಳ ನಡೆಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಎಲ್ಲ ಇಲಾಖೆಗಳು ಸೇರಿದಂತೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ ಉದ್ಯೋಗ ಮೇಳ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ ಹೇಳಿದ್ದಾರೆ.ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೌಶಲ್ಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ಉದ್ಯೋಗ ಮೇಳದಲ್ಲಿ ನಮ್ಮ ಜಿಲ್ಲೆ ಹಾಗೂ ಪಕ್ಕದ ಜಿಲ್ಲೆಗಳಲ್ಲಿರುವ ಕೈಗಾರಿಕೆಗಳು, ಹೋಂ ಸ್ಟೇಗಳು, ಬಿಲ್ಡರ್‍ಸ್, ಟೆಕ್ಸ್‌ಟೈಲ್ಸ್ ಮತ್ತಿತರ ವಿವಿಧ ಕಂಪನಿಗಳ ಉದ್ಯೋಗದಾತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದರು.ಅದಲ್ಲದೆ ನಿರುದ್ಯೋಗವಂತ ಯುವಕ-ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಬರುವ ಯುವಕ-ಯುವತಿಯರಿಗೆ ನಿರಾಶೆಯಾಗದಂತೆ ಅವರಿಗೆ ಉದ್ಯೋಗ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಬೇಕು. ಏಳರಿಂದ ಪದವಿ ಪಡೆದ ವಿವಿಧ ರೀತಿಯ ಕೌಶಲ್ಯ ಪಡೆದಿರುವ ಅಭ್ಯರ್ಥಿಗಳು ಭಾಗವಹಿಸಬೇಕು ಎಂದು ಹೇಳಿದರು. ಈ ಬಗ್ಗೆ ವ್ಯಾಪಕ ಪ್ರಚಾರವನ್ನು ಗ್ರಾಮ ಪಂಚಾಯಿತಿ ಮಟ್ಟದಿಂದ ಪಟ್ಟಣ ಪ್ರದೇಶದ ಎಲ್ಲ ಇಲಾಖೆಗಳ ಕಚೇರಿಗಳಲ್ಲಿಯೂ ತಿಳಿಸುವ ಕೆಲಸ ವಾಗಬೇಕು ಎಂದ ಅವರು. ಎಲ್ಲ ಪದವಿ ಕಾಲೇಜ್‌ಗಳು, ಹಾಸ್ಟೇಲ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಬೇಕು. ಜಿಲ್ಲೆಯಲ್ಲಿರುವ ಐಟಿಐ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಬಂಧಪಟ್ಟ ಇಲಾಖೆಗಳು ಕ್ರಮವಹಿಸಬೇಕು ಎಂದರುವೃತ್ತಿ ಕೌಶಲ್ಯ ಮತ್ತು ಸಂಜೀವಿನಿ ಮೂಲಕ ನಡೆಯುವ ಉದ್ಯೋಗ ಮೇಳಕ್ಕೆ ಸರ್ಕಾರಿ ನೌಕರ ಸಂಘ, ವಿವಿಧ ಶಿಕ್ಷಣ ಸಂಸ್ಥೆಗಳು, ಹೊರಗುತ್ತಿಗೆ ಮೂಲಕ ಸಿಬ್ಬಂದಿ ಒದಗಿಸುವ ಏಜೆನ್ಸಿಗಳು, ರೇಸಾರ್ಟ್, ವಿವಿಧ ಸರ್ಕಾರಿ ಬ್ಯಾಂಕ್, ಹಾಗೂ ಖಾಸಗಿ ಬ್ಯಾಂಕ್‌ಗಳಿಗೆ ಉದ್ಯೋಗ ನೀಡುವ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಡೆದು ಜಿಲ್ಲೆಯ ವಿದ್ಯಾವಂತ ನಿರುದ್ಯೋಗಗಳಿಗೆ ಕೆಲಸ ಕೊಡಿಸುವ ಕಾರ್ಯಕ್ರಮವಾಗಬೇಕು ಎಂದರು.ವಿವಿಧ ಕಂಪನಿಗಳು ಕೌಶಲ್ಯ ಇರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ದೃಷ್ಠಿಯಿಂದ ಅರ್ಹ ವಿದ್ಯಾಭ್ಯಾಸ ಮಾಡಿರುವ ಅಭ್ಯರ್ಥಿಗಳ ಗಮನಕ್ಕೆ ತರುವಂತೆ ಪ್ರಚಾರ ಕೈಗೊಳ್ಳಬೇಕು. ಸುಮಾರು ೫೦-೬೦ ಕಂಪನಿಗಳು ವಿವಿಧ ರೀತಿಯ ಉದ್ಯೋಗಾದಾತರು ಬರುವ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು. ಅಂದಾಜು ೪ ರಿಂದ ೫ ಸಾವಿರ ಉದ್ಯೋಗ ಆರಿಸಿ ಬರುವ ಅಭ್ಯರ್ಥಿಗಳು ಬರುವ ನಿರೀಕ್ಷೆ ಇದೆ ಗಿರಿಜನ ಪ್ರದೇಶಗಳಲ್ಲಿರುವ ವಿದ್ಯಾವಂತ ನಿರುದ್ಯೋಗಿಗಳನ್ನು ಕರೆ ತರುವ ಪ್ರಯತ್ನ ಮಾಡಬೇಕು. ಈ ಉದ್ಯೋಗ ಮೇಳ ನಗರದ ಐಡಿಎಸ್‌ಜಿ ಕಾಲೇಜ್ ಆವರಣದಲ್ಲಿ ನಡೆಸಲು ಅಗತ್ಯ ಕ್ರಮಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.ಸಭೆಯಲ್ಲಿ ಉಪಕಾರ್ಯದರ್ಶಿ ಕೊರವರ, ಯೋಜನಾ ಶಾಖೆ ನಯನ, ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಪ್ರಶಾಂತ್ ಸೇರಿದಂತೆ ವಿವಿಧ ಇಲಾಖೆಗಳು ಅಧಿಕಾರಿಗಳು, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ದೇವೆಂದ್ರ, ಹೋಂ ಸ್ಟೇಗಳ ಮಾಲೀಕರ ಸಂಘದ, ವಿವಿಧ ಕೈಗಾರಿಕೆಗಳ ಹಾಗೂ ಕಂಪನಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಕ್ಯಾಪ್ಷನ್‌:

- ಉದ್ಯೋಗ ಮೇಳ ನಡೆಸಲು ಸಿಇಒ ನೇತೃತ್ವದ ಪೂರ್ವಭಾವಿ ಸಭೆ