ಸಾರಾಂಶ
ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರಜ್ಞಾ ಉದ್ಯೋಗ ಮೇಳ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಮಾರುಕಟ್ಟೆ ಎನ್ನುವುದು ಸುಲಭದ ಮಾತಲ್ಲ. ಇಂತಹ ಉದ್ಯೋಗ ಮೇಳಗಳಲ್ಲಿ ಭಾಗವಹಿಸಿ ಉದ್ಯೋಗವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಬೇಕು. ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಉದ್ಯೋಗಾಕಾಂಕ್ಷಿಗಳಿಗೆ ಎಂದು ಪೂರ್ಣಪ್ರಜ್ಞ ಕಾಲೇಜು ಉಡುಪಿ ಆಡಳಿತ ಮಂಡಳಿಯ ಕೋಶಾಧಿಕಾರಿ ಸಿಎ ಪ್ರಶಾಂತ್ ಹೊಳ್ಳ ಹೇಳಿದರು.ಇಲ್ಲಿನ ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ಪ್ರಜ್ಞಾ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಜ್ಞಾ ಉದ್ಯೋಗ ಮೇಳದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ರಾಮು ಎಲ್., ಇಂತಹ ಉದ್ಯೋಗ ಮೇಳವನ್ನು ಪ್ರತಿವರ್ಷ ಕಾಲೇಜಿನಲ್ಲಿ ಆಯೋಜಿಸಲಾಗುತ್ತಿದ್ದು, ಹಲವಾರು ಜನರು ಇದರ ಪ್ರಯೋಜನಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಎಲ್ಲ ವಿದ್ಯಾರ್ಥಿಗಳಿಗೂ ಕೂಡ ಇಂತಹ ಅವಕಾಶಗಳನ್ನು ಕಲ್ಪಿಸುವುದು ನಮ್ಮ ವಿದ್ಯಾಸಂಸ್ಥೆಯ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಶುಭ ಹಾರೈಸಿದರು.ಕುಂದಾಪುರದ ಸೃಷ್ಟಿ ಇನ್ಫೋಟೆಕ್ ಮ್ಯಾನೇಜಿಂಗ್ ಡೈರೆಕ್ಟರ್ ಹರ್ಷವರ್ಧನ್ ಶೆಟ್ಟಿ ಹಾಗೂ ಕೇಂದ್ರ ಸರ್ಕಾರದ ಕೌಶಲ್ಯ ಅಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಸಂಧ್ಯಾರಾಣಿ, ಉದ್ಯೋಗ ಮೇಳದ ಯಶಸ್ಸಿಗೆ ಸಹಕರಿಸಿದ್ದರು.
ಉದ್ಯೋಗ ಮೇಳದಲ್ಲಿ ೧೮ ಕಂಪನಿಗಳು ಭಾಗವಹಿಸಿದ್ದು, ಸುಮಾರು ೬೦೦ಕ್ಕೂ ಹೆಚ್ಚು ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸಿದ್ದರು. ೩೫೦ಕ್ಕೂ ಹೆಚ್ಚು ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರು. ವಿವಿಧ ಕಂಪನಿಗಳಲ್ಲಿ ಸುಮಾರು ೨೬೯ ವಿದ್ಯಾರ್ಥಿಗಳು ಮುಂದಿನ ಸುತ್ತಿಗೆ ಆಯ್ಕೆಯಾದರು. ೧೪೮ ವಿದ್ಯಾರ್ಥಿಗಳು ಅಂತಿಮವಾಗಿ ಆಯ್ಕೆಗೊಂಡಿದ್ದಾರೆ.ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ರಮೇಶ್ ಟಿ.ಎಸ್., ಅಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕ ಡಾ. ವಿನಯ್ ಕುಮಾರ್, ಉದ್ಯೋಗ ಮಾರ್ಗದರ್ಶನ ಘಟಕದ ಸಂಯೋಜಕ ಡಾ. ಆನಂದ ಆಚಾರ್ಯ, ಪ್ಲೇಸ್ ಮೆಂಟ್ ಆಫೀಸರ್ ಜಯಲಕ್ಷ್ಮೀ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಪ್ರತಿಭಾ ಭಟ್ ನಿರ್ವಹಿಸಿದರು. ಶ್ರೀರಕ್ಷಾ ಸ್ವಾಗತಿಸಿದರು. ಸುಮಲತಾ ವಂದಿಸಿದರು.