ಸರ್ಕಾರದ ಸೌಲಭ್ಯ ಬಳಕೆ ಮಾಡಿಕೊಂಡು ಸಾಧನೆ ಮಾಡಿ: ಪಂಕಜ ಪ್ರಕಾಶ್

| Published : Mar 22 2025, 02:04 AM IST

ಸರ್ಕಾರದ ಸೌಲಭ್ಯ ಬಳಕೆ ಮಾಡಿಕೊಂಡು ಸಾಧನೆ ಮಾಡಿ: ಪಂಕಜ ಪ್ರಕಾಶ್
Share this Article
  • FB
  • TW
  • Linkdin
  • Email

ಸಾರಾಂಶ

ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾ ಪ್ರಪಂಚವನ್ನು ವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸಲು ಕಂಪ್ಯೂಟರ್ ಮತ್ತು ಆಂಗ್ಲಭಾಷಾ ಜ್ಞಾನವು ಅತ್ಯಗತ್ಯ. ಇದರ ಜೊತೆಗೆ ಪುಸ್ತಕಗಳನ್ನು ಓದಿಕೊಂಡು ತಮ್ಮ ಜ್ಞಾನಶಕ್ತಿ ಹೆಚ್ಚಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಿ ಗುರಿಸಾಧನೆ ಮಾಡಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ವಿದ್ಯಾರ್ಥಿನಿಯರು ಸರ್ಕಾರ ನೀಡುವ ಸೌಲಭ್ಯ ಸದ್ಭಳಕೆ ಮಾಡಿಕೊಂಡು ಸಾಧನೆ ಮಾಡಬೇಕು ಎಂದು ಪುರಸಭೆ ಅಧ್ಯಕ್ಷೆ ಪಂಕಜಾ ಪ್ರಕಾಶ್ ಮನವಿ ಮಾಡಿದರು.

ಪಟ್ಟಣದ ಹೊಸಹೊಳಲು ರಸ್ತೆಯ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ನಿಲಯಕ್ಕೆ ಲಕ್ಷಾಂತರ ರು. ಬೆಲೆಬಾಳುವ ಕಂಪ್ಯೂಟರ್‌, ಗೀಸರ್‌ ಹಾಗೂ ಸ್ಟೌವ್‌ಗಳನ್ನು ವಿತರಿಸಿ ಮಾತನಾಡಿದರು.

ಪರಿಸಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಸರ್ಕಾರವು ಕೋಟ್ಯಂತರ ರು. ಅನುದಾನ ಖರ್ಚು ಮಾಡುತ್ತಿದೆ. ಪುರಸಭೆ ಎಸ್.ಸಿ, ಎಸ್.ಟಿ ಅನುದಾನದಿಂದ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಪುರಸಭೆ ನಿಧಿ ಹಾಗೂ ಅನುದಾನದಿಂದ ಕಂಪ್ಯೂಟರ್, ಲ್ಯಾಪ್‌ಟಾಪ್, ಗೀಸರ್‌ಗಳು, ಸ್ಟೌವ್‌ಗಳು, ಕುಡಿಯುವ ನೀರಿನ ಶುದ್ಧೀಕರಣ ಘಟಕ ಸೇರಿದಂತೆ ಮೂಲ ಸೌಲಭ್ಯಗಳನ್ನು ಇಲಾಖೆ ಬೇಡಿಕೆಗೆ ಅನುಗುಣವಾಗಿ ಸರಬರಾಜು ಮಾಡುತ್ತಿದ್ದೇವೆ ಎಂದರು.

ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾ ಪ್ರಪಂಚವನ್ನು ವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸಲು ಕಂಪ್ಯೂಟರ್ ಮತ್ತು ಆಂಗ್ಲಭಾಷಾ ಜ್ಞಾನವು ಅತ್ಯಗತ್ಯ. ಇದರ ಜೊತೆಗೆ ಪುಸ್ತಕಗಳನ್ನು ಓದಿಕೊಂಡು ತಮ್ಮ ಜ್ಞಾನಶಕ್ತಿ ಹೆಚ್ಚಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಿ ಗುರಿಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ಈ ವೇಳೆ ಪುರಸಭೆ ಸ್ಥಾಯಿಸಮಿತಿ ಅಧ್ಯಕ್ಷ ಕೆ.ಆರ್.ರವೀಂದ್ರಬಾಬು, ಹಿರಿಯ ಸದಸ್ಯ ಡಿ.ಪ್ರೇಮಕುಮಾರ್, ಸ್ವರ್ಣಜಯಂತಿ ಶಹರೀ ರೋಜ್‌ಗಾರ್ ಯೋಜನಾಧಿಕಾರಿ ಭಾರತಿ ಅನಂತಶಯನ, ಮುಖ್ಯಾಧಿಕಾರಿ ನಟರಾಜು, ತಾಲೂಕು ಸಮಾಜಕಲ್ಯಾಣಾಧಿಕಾರಿ ದಿವಾಕರ್, ನಿಲಯಪಾಲಕಿ ಪುಷ್ಪಾ ಸೇರಿದಂತೆ ವಿದ್ಯಾರ್ಥಿಗಳ ಪೋಷಕರು ಇದ್ದರು.