ಸಾರಾಂಶ
ಕನ್ನಡಪ್ರಭ ವಾರ್ತೆ ದೇವಲಾಪುರ
ಹಳ್ಳಿಗಳಲ್ಲಿ ಎನ್‌ಎಸ್‌ಎಸ್ ಶಿಬಿರಗಳ ಮೂಲಕ ಪರಿಸರ ಸ್ವಚ್ಛತೆ ಕೈಗೊಂಡಾಗ ಮಾತ್ರ ಮಾದರಿ ಗ್ರಾಮ ಮಾಡುವ ಕನಸು ನನಸಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅಪಾರ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜ್ ಹೇಳಿದರು.ನಾಗಮಂಗಲ ತಾಲೂಕು ದೇವಲಾಪುರ ಹೋಬಳಿಯ ಚೌದರಿ ಕೊಪ್ಪಲು ಗ್ರಾಮದಲ್ಲಿ ಶ್ರೀಆದಿಚುಂಚನಗಿರಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ವತಿಯಿಂದ ಮೇ 27ರವರೆಗೆ ಹಮ್ಮಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತನಾಡಿದರು.
ರಾಷ್ಟ್ರೀಯ ಸ್ವಯಂ ಸೇವಾ ಭಾವನೆ ರಾಜ್ಯದಲ್ಲೇಡೆ ಇದ್ದು, ರಾಜ್ಯದ ಕುಗ್ರಾಮಗಳನ್ನು ಇಂತಹ ಯೋಜನೆಗಳಲ್ಲಿ ಅಳವಡಿಸಿಕೊಂಡು ಗ್ರಾಮಗಳ ಅಭಿವೃದ್ಧಿ ಪಥದತ್ತ ಹೆಜ್ಜೆ ಹಾಕಲು ನೆರವಾಗಬೇಕು. ಈ ಮೂಲಕ ಗ್ರಾಮಗಳು ಮಾದರಿ ಗ್ರಾಮಗಳಾಗಿ ಪರಿವರ್ತನೆಯಾಗಲು ಸಾಧ್ಯವಾಗುತ್ತದೆ ಎಂದರು.ವಿದ್ಯಾರ್ಥಿಗಳು ಶ್ರೀಮಠದ ಇಂತಹ ಯೋಜನೆಗಳಲ್ಲಿ ವ್ಯಾಸಂಗದ ಜೊತೆಗೆ ಭಾಗವಹಿಸಿ ಸಮಾಜ ಸೇವೆ ಮೂಲಕ ಮುಖ್ಯವಾಹಿನಿಗೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಹಾಗೂ ಗಣ್ಯರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಪಾವನ ಸಾನಿಧ್ಯವನ್ನು ಪುರುಷೋತ್ತಮಾನಂದನಾಥ ಸ್ವಾಮೀಜಿ ವಹಿಸಿ ಆಶೀರ್ವಚನ ನೀಡಿದರು.ಸಮಾರಂಭದಲ್ಲಿ ನಾಡೋಜ ಡಾ.ವೊಡೇ ಪಿ.ಕೃಷ್ಣ ಗಾಂಧೀಜಿ ಚಿಂತನೆಗಳುಸ ತತ್ವಗಳು, ಡಾ.ಹೋ.ಶ್ರೀನಿವಾಸಯ್ಯರ ಕಾರ್ಯವೈಖರಿ ಹಾಗೂ ಅವರ ಸೇವಾ ಮನೋಭಾವ, ಗಾಂಧಿ ತತ್ವದ ಪ್ರತಿಪಾದನೆ ಬಗ್ಗೆ ಮಾತನಾಡಿದರು. ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಸಿಇಒ ಡಾ.ಎನ್.ಎಸ್.ರಾಮೇಗೌಡ ಅಧ್ಯಕ್ಷತೆ ವಹಿಸಿದ್ದರು. ಚಂದ್ರೇಗೌಡ, ಡಾ.ಬಿ.ಕೆ.ಲೋಕೇಶ್, ಡಾ.ಹೋ.ಶ್ರೀನಿವಾಸಯ್ಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಶಶಿಕೃಷ್ಣ, ಗಾಂಧಿಭವನ ನಿರ್ದೇಶಕ ಬಿ.ಜಿ.ಶಿವರಾಜು, ಪ್ರಾಂಶುಪಾಲ ಡಾ.ಎಚ್.ಎಸ್ .ರವೀಂದ್ರ, ಬ್ರಹ್ಮಚಾರಿ ಸತ್ ಕೀರ್ತಿನಾಥ ಸ್ವಾಮೀಜಿ ಹಾಗೂ ಗಣ್ಯರು ಗ್ರಾಮಸ್ಥರು ಭಾಗವಹಿಸಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))