ಸಾರಾಂಶ
ಸ್ಲಂ ಜನಾಂದೋಲನ-ಕರ್ನಾಟಕ ವತಿಯಿಂದ ಗದಗ-ಬೆಟಗೇರಿ ನಗರದ ಸ್ಲಂಗಳಲ್ಲಿ ಮತದಾನ ಜಾಗೃತಿ ಸಭೆ ನಡೆಯಿತು.
ಕನ್ನಡಪ್ರಭ ವಾರ್ತೆ ಗದಗ
ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನವಾಗಿ ಗುರುತಿಕೊಂಡಿರುವ ಭಾರತದ ಸಂವಿಧಾನ ಸಧ್ಯ ಸಂಕಟ ಸಮಯದಲ್ಲಿದ್ದು, ಅದರ ಸಂರಕ್ಷಣೆಗಾಗಿ ನಾವು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷರಾದ ಇಮ್ತಿಯಾಜ್ ಆರ್. ಮಾನ್ವಿ ಹೇಳಿದರು.ಸ್ಲಂ ಜನಾಂದೋಲನ-ಕರ್ನಾಟಕ ವತಿಯಿಂದ ಗದಗ-ಬೆಟಗೇರಿ ನಗರದ ಸ್ಲಂಗಳಲ್ಲಿ ಮತದಾನ ಜಾಗೃತಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ನಮ್ಮ ಸಂವಿಧಾನ ಖಾತರಿಪಡಿಸಿದೆ. ಎಲ್ಲರ ನಡುವೆ ಭ್ರಾತೃತ್ವವನ್ನು ಬೆಳಸುವುದೇ ಸಂವಿಧಾನದ ಮೂಲ ಆಶಯವಾಗಿದೆ ಎಂದರು.ಸ್ಲಂ ಸಮಿತಿ ಉಪಾಧ್ಯಕ್ಷ ರವಿಕುಮಾರ ಬೆಳಮಕರ, ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಸಂಚಾಲಕಿ, ಮೆಹರುನಿಸಾ ಢಾಲಾಯತ, ಇಬ್ರಾಹಿಂ ಮುಲ್ಲಾ, ಶಿವಾನಂದ ಶಿಗ್ಲಿ, ಸಾಕ್ರುಬಾಯಿ ಗೋಸಾವಿ, ಮೆಹಬೂಬಸಾಬ ಬಳ್ಳಾರಿ, ಬಾಷಾಸಾಬ ಡಂಬಳ, ದಾದು ಗೋಸಾವಿ, ಖಾಜಾಸಾಬ ಇಸ್ಮಾಯಿಲನವರ, ಶಿವಪ್ಪ ಲಕ್ಕುಂಡಿ, ಸಲೀಮ ಬೈರಕದಾರ, ಚಂದ್ರಿಕಾ ರೋಣದ, ಅಫ್ರೋಜಾ ಹುಬ್ಬಳ್ಳಿ, ಶೊಸೀಲಮ್ಮ ಗೊಂದರ, ಫೈರುಜಾ ಹುಬ್ಬಳ್ಳಿ, ಮೆಹರುನಿಸಾ ಡಂಬಳ, ತಿಪ್ಪಮ್ಮ ಕೊರವರ, ಕೌಸರ ಬೈರಕದಾರ, ವಿಶಾಲಕ್ಷಿ ಹಿರೇಗೌಡ್ರ, ನಗೀನಾ ಯಲಗಾರ, ಪೀರಮ್ಮ ನದಾಫ, ಜೈತುನಬಿ ಶಿರಹಟ್ಟಿ, ಲಕ್ಷ್ಮಿ ಮಣಿವಡ್ಡರ, ಶೋಭಾ ಹಿರೇಮಠ, ಮಕ್ತುಮಸಾಬ ಮುಲ್ಲಾನವರ ಹಾಗೂ ಗದಗ-ಬೆಟಗೇರಿ ನಗರದ ವಿವಿಧ ಸ್ಲಂ ಪ್ರದೇಶದ ನೂರಾರು ಸ್ಲಂ ನಿವಾಸಿಗಳು ಸಭೆಯಲ್ಲಿ ಭಾಗವಹಿಸಿದ್ದರು.