ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ: ಮಂಗಲಾ

| Published : Mar 16 2024, 01:50 AM IST

ಸಾರಾಂಶ

ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂದು ಪ್ರಧಾನ ಅಂಚೆ ಕಚೇರಿಯ ಅಂಚೆ ಪಾಲಕಿ ಮಂಗಲಾ ಭಾಗವತ್ ನುಡಿದರು.

ಬೀದರ್: ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂದು ಪ್ರಧಾನ ಅಂಚೆ ಕಚೇರಿಯ ಅಂಚೆ ಪಾಲಕಿ ಮಂಗಲಾ ಭಾಗವತ್ ನುಡಿದರು.

ಇನ್ನರ್‌ವ್ಹೀಲ್ ಕ್ಲಬ್‌ವತಿಯಿಂದ ಇಲ್ಲಿಯ ಕೃಷ್ಣ ರಿಜೆನ್ಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಬ್ಬ ಮಹಿಳೆ ಇನ್ನೊಂದು ಮಹಿಳೆಗೆ ನೆರವಾಗಬೇಕು. ಪರಸ್ಪರ ಏಳಿಗೆಗೆ ಕೈಜೋಡಿಸಬೇಕು ಎಂದು ತಿಳಿಸಿದರು.

ಇನ್ನರ್ ವ್ಹೀಲ್ ಕ್ಲಬ್ ಮಹಿಳೆಯರ ಸರ್ವಾಂಗೀಣ ಬೆಳವಣಿಗೆಗೆ ಸಹಕರಿಸುತ್ತಿದೆ. ಹೊಲಿಗೆ ಯಂತ್ರ ವಿತರಣೆ, ಸ್ವ-ಉದ್ಯೋಗ ತರಬೇತಿ, ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ ಮೊದಲಾದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ ಎಂದು ಶ್ಲಾಘಿಸಿದರು.

ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಅನಿತಾ ಚಿಂತಾಮಣಿ ಮಾತನಾಡಿ, ಪೋಸ್ಟ್ ಮೆನ್ ಹಾಗೂ ಮಲ್ಟಿ ಟಾಸ್ಕ್ ಸ್ಟಾಫ್ (ಎಂಟಿಎಸ್) ಹುದ್ದೆಗಳಲ್ಲಿ ಹಿಂದೆ ಬಹುತೇಕ ಪುರುಷರೆ ಇರುತ್ತಿದ್ದರು. ಈಗ ಈ ಹುದ್ದೆಗಳಲ್ಲಿ ಮಹಿಳೆಯರೂ ಅಧಿಕ ಸಂಖ್ಯೆಯಲ್ಲಿದ್ದಾರೆ. ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಮೂಲಕ ತಾವು ಮನಸ್ಸು ಮಾಡಿದ್ದಲ್ಲಿ ಯಾವ ಕ್ಷೇತ್ರದಲ್ಲೂ ಮುನ್ನಡೆ ಸಾಧಿಸಬಹುದು ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ನುಡಿದರು.

ಅಂಚೆ ಇಲಾಖೆಯ ಮಂಜುಳಾ ಮಾತನಾಡಿದರು. ಅಂಚೆ ಇಲಾಖೆ ಮಹಿಳಾ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಬಡ ಮಹಿಳೆ ಸಾಧನ ಅವರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಲಾಯಿತು.

ಮಂಜುಳಾ ಮೂಲಗೆ ಸ್ವಾಗತಿಸಿದರೆ ಸುನಯನ ಗುತ್ತಿ ನಿರೂಪಿಸಿ. ಕವಿತಾ ಪ್ರಭ ವಂದಿಸಿದರು.