ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಮಿಪದ ಮಾಲಂಬಿ ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಮಾಲಂಬಿ ಜಂಕ್ಸನ್ ಬಸ್ಸು ತಂಗುದಾಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಯನ್ನು ವಿಜೃಂಬಣೆಯಿಂದ ವಿಸರ್ಜಿಸಲಾಯಿತು.

ಶನಿವಾರಸಂತೆ ; ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಮಿಪದ ಮಾಲಂಬಿ ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಮಾಲಂಬಿ ಜಂಕ್ಸನ್ ಬಸ್ಸು ತಂಗುದಾಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಯನ್ನು ವಿಜೃಂಬಣೆಯಿಂದ ವಿಸರ್ಜಿಸಲಾಯಿತು.

ಗಣೇಶೋತ್ಸವ ಪ್ರಯುಕ್ತ ಶನಿವಾರ ಮಧ್ಯಾಹ್ನ ಪ್ರತಿಷ್ಠಾಪನಾ ವೇದಿಕೆಯಲ್ಲಿ ಗೌರಿ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ವಾಹನದಲ್ಲಿ ಹೂವಿನಿಂದ ಅಲಂಕರಿಸಿದ ಮಂಟಪದಲ್ಲಿ ಗೌರಿ ಗಣೇಶ ಮೂರ್ತಿ ಕೂರಿಸಲಾಯಿತು. ಗ್ರಾಮದ ಬೀದಿಗಳಲ್ಲಿ ಗಣೇಶೋತ್ಸವ ಮೆರವಣಿಗೆ ನಡೆಸಲಾಯಿತು. ರಾತ್ರಿ ೮ ಗಂಟೆ ವರೆಗೂ ಗಣೇಶೋತ್ಸವದ ಶೋಭಯಾತ್ರೆ ನಡೆಸಲಾಯಿತು.

ಮಾಲಂಬಿ ಗ್ರಾಮದ ಬಾಲ್ಗೆರೆಯಲ್ಲಿ ಗೌರಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.