ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ತಂದೆ ಮಲ್ಲಣ್ಣ ನಿಧನ

| Published : Aug 07 2024, 01:07 AM IST

ಸಾರಾಂಶ

ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಂದೆ ಪಿ.ಎಲ್.ಮಲ್ಲಣ್ಣ ನಿಧನರಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲೂಕಿನ ಪೂರಿಗಾಲಿಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ಪಾರ್ಥಿವ ಶರೀರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದ ಮುಖ್ಯಮಂತ್ರಿಗಳು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಂದೆ ಪಿ.ಎಲ್.ಮಲ್ಲಣ್ಣ ನಿಧನರಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲೂಕಿನ ಪೂರಿಗಾಲಿಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು.

ಪಾರ್ಥಿವ ಶರೀರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದ ಮುಖ್ಯಮಂತ್ರಿಗಳು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಎನ್. ಚಲುವರಾಯಸ್ವಾಮಿ, ವಸತಿ ಸಚಿವ ಜಮೀರ್ ಅಹಮದ್, ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ, ಸಮಾಜಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಸಚಿವ ಡಿ.ಸುಧಾಕರ್, ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ, ಕೆ.ಆರ್.ನಗರ ಶಾಸಕ ಡಿ.ರವಿಶಂಕರ್ , ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಮಂಡ್ಯ ಶಾಸಕ ರವಿಕುಮಾರ್, ಶಾಸಕರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ, ಅಜಯ್ ಸಿಂಗ್, ವೀರೇಂದ್ರ, ವಿಧಾನ ಷರಿಷತ್ ಸದಸ್ಯರಾದ ದಿನೇಶ್ ಗೌಳಿಗೌಡ, ಮಧುಜಿ.ಮಾದೇಗೌಡ, ಪುಟ್ಟಣ್ಣ, ಮಾಜಿ ಉಪ ಸಭಾಪತಿ, ಮರಿತಿಬ್ಬೇಗೌಡ, ಮಾಜಿ ಸಚಿವ ಬಿ.ಸೋಮಶೇಖರ್, ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ, ಮಲ್ಲಾಜಮ್ಮ, ಜಯಣ್ಣ, ಎಡಿಜಿಪಿ ಎಂ.ನಂಜುಂಡಸ್ವಾಮಿ, ಮುಖಂಡರಾದ ಜಿ.ಮುನಿರಾಜು, ಡಾ.ಮೂರ್ತಿ, ಡೀಸಿ ಡಾ. ಕುಮಾರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಒ ಶೇಕ್ ತನ್ವೀರ್ ಆಶಿಫ್, ಉಪವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಮುಖಂಡರು ಅಂತಿಮ ದರ್ಶನ ಪಡೆದರು.ಶಾಸಕ ಪಿ.ಎಂ.ನರೇಂದ್ರಸ್ವಾಮಿಗೆ ಪಿತೃವಿಯೋಗ

ಮಳವಳ್ಳಿ:

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ತಂದೆ ಪಿ.ಎಲ್‌.ಮಲ್ಲಯ್ಯ (93 ವರ್ಷ) ಅವರು ವಯೋಸಹಜ ಕಾಯಿಲೆಯಿಂದ ಸೋಮವಾರ ಮಧ್ಯರಾತ್ರಿ ನಿಧನರಾದರು.

ಮೃತರು ತಾಲೂಕು ಬೋರ್ಡ್ ಸದಸ್ಯರಾಗಿ, ಪೂರಿಗಾಲಿ ಗ್ರಾಪಂ, ಹಾಲು ಉತ್ಪಾದಕರ ಸಹಕಾರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಮೃತ ಪಿ.ಎಲ್.ಮಲ್ಲಯ್ಯ ಅವರು ಪತ್ನಿ ಮಹದೇವಮ್ಮ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಸ್ವಗ್ರಾಮ ತಾಲೂಕಿನ ಪೂರಿಗಾಲಿ ಗ್ರಾಮದಲ್ಲಿ ನಡೆಯಿತು.