ಮಂಗಳೂರು: ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆಯಲ್ಲಿ ಕನ್ನಡ ಭಾಷಾ ಅಲ್ಪಸಂಖ್ಯಾತರನ್ನು ಹೊರತುಪಡಿಸಲು ಆಗ್ರಹಿಸಿ, ಮುಂದಿನ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಚುನಾಯಿತರಾಗುವ ನೂತನ ಮುಖ್ಯಮಂತ್ರಿ, ಸಚಿವರು, ಶಾಸಕರು ಈ ಮಸೂದೆಯನ್ನು ಮರು ಪರಿಶೀಲಿಸಿ ಸೂಕ್ತ ತಿದ್ದುಪಡಿಯೊಂದಿಗೆ ಪುನಃ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಕಾಸರಗೋಡು ಪ್ರದೇಶದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಪ್ರತಿನಿಧಿಗಳನ್ನೊಳಗೊಂಡ ‘ಕಾಸರಗೋಡು ಕನ್ನಡಿಗರ ದುಂಡು ಮೇಜಿನ ಪರಿಷತ್ತು’ ಮೂಲಕ ಮನವಿ ಸಿದ್ಧಪಡಿಸಿ ಅಭಿಯಾನ ಕೈಗೊಳ್ಳಲು ತೀರ್ಮಾನಿಸಲಾಯಿತು.
ಕಾಸರಗೋಡು ಕನ್ನಡ ಗ್ರಾಮದಲ್ಲಿ ಇತ್ತೀಚೆಗೆ ಪ್ರಥಮ ಕಾಸರಗೋಡು ಕನ್ನಡಿಗರ ದುಂಡು ಮೇಜಿನ ಪರಿಷತ್ತು ನಡೆಯಿತು. ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು.ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ಹೋಡಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯ ಕಟ್ಟೆ, ಡಾ.ಕೆ.ಎನ್. ವೆಂಕಟ್ರಮಣ ಹೊಳ್ಳ, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಪು, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಸುಕೇಶ್ ಎ., ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಧಾರವಾಡ ಜಿಲ್ಲೆ, ಕರ್ನಾಟಕ ಸಂಗ್ರಾಮ ಸೇನೆ ರಾಜ್ಯಾಧ್ಯಕ್ಷ ಸಂಜೀವ ದುಮಕನಾಳ, ಧಾರವಾಡ ಜಯಾನಂದ ಕುಮಾರ್ ಹೊಸದುರ್ಗ, ವೆಂಕಟ್ ಭಟ್ ಎಡನೀರು, ಕರ್ನಾಟಕ ಸಮಿತಿ ಕಾರ್ಯದರ್ಶಿ, ನ್ಯಾಯವಾದಿ ಕೆ. ಸತ್ಯನಾರಾಯಣ ತಂತ್ರಿ, ಹರೀಶ್ ಸುಲಾಯ ಒಡ್ಡಂಬೆಟ್ಟು, ಕರ್ನಾಟಕ ಗಮಕ ಕಲಾ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಟಿ.ಶಂಕರ ನಾರಾಯಣ ಭಟ್, ಪತ್ರಕರ್ತರಾದ ವಿ.ರಾಜ್ ಆಡೂರು, ಪುರುಷೋತ್ತಮ ಪೆರ್ಲ, ಪುರುಷೋತ್ತಮ ಭಟ್, ಪ್ರದೀಪ್ ಬೇಕಲ್, ಮಾಜಿ ಕೌನ್ಸಿಲರ್ ಕೆ.ವರಪ್ರಸಾದ್ ಕೋಟೆಕಣೆ, ಕೆ. ಗುರುಪ್ರಸಾದ್ ಕೋಟೆಕಣಿ, ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಪ್ರಧಾನ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ಗಡಿನಾಡ ಕಲಾವಿದರು ಸಂಸ್ಥೆಯ ಉಪಾಧ್ಯಕ್ಷ ದಿವಾಕರ ಪಿ. ಅಶೋಕನಗರ ನ್ಯಾಯವಾದಿ ಪರಿಮಳ ರಾವ್ ಕೆ., ಡಾ.ವಾಣಿಶ್ರೀ, ಶ್ರೀಕಾಂತ ಕಾಸರಗೋಡು ಇದ್ದರು.
ಮಾಜಿ ಕೌನ್ಸಿಲರ್ ಶಂಕರ ಕೆ. ಸ್ವಾಗತಿಸಿದರು. ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಕೆ. ಜಗದೀಶ ಕೂಡ್ಲು ನಿರೂಪಿಸಿದರು. ದಿವ್ಯಾಗಟ್ಟಿ ಪರಕ್ಕಿಲ ಸಮನ್ವಯಕಾರಕರಾಗಿ ಸಹಕರಿಸಿದರು.