ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಗಡಿನಾಡು ಕನ್ನಡ ಉತ್ಸವ

| Published : Feb 10 2024, 01:45 AM IST

ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಗಡಿನಾಡು ಕನ್ನಡ ಉತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕನ್ನಡ ಮತ್ತು ಸಂಸೃತಿ ಇಲಾಖೆ ಹಾಗೂ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಗಡಿನಾಡು ಕನ್ನಡ ಉತ್ಸವ ಕಾರ್ಯಕ್ರಮವನ್ನು ಫೆ.10ರಂದು ಸಂಜೆ 5 ಗಂಟೆಗೆ ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಬಯಲು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.

ಕನ್ನಡಫ್ರಭ ವಾರ್ತೆ ಚಾಮರಾಜನಗರ

ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕನ್ನಡ ಮತ್ತು ಸಂಸೃತಿ ಇಲಾಖೆ ಹಾಗೂ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಗಡಿನಾಡು ಕನ್ನಡ ಉತ್ಸವ ಕಾರ್ಯಕ್ರಮವನ್ನು ಫೆ.10ರಂದು ಸಂಜೆ 5 ಗಂಟೆಗೆ ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಬಯಲು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.

ಸಾಲೂರುಮಠದ ಶ್ರೀಗಳಾದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಹಿಂದುಳಿದ ವರ್ಗಗಳು ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಗಡಿನಾಡು ಕನ್ನಡ ಸಂಗೀತೋತ್ಸವಕ್ಕೆ ಚಾಲನೆ ನೀಡುವರು. ಶಾಸಕ ಎಂ.ಆರ್. ಮಂಜುನಾಥ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಗೌರವ ಉಪಸ್ಥಿತಿ ವಹಿಸುವರು. ಲೋಕಸಭಾ ಸದಸ್ಯ ವಿ. ಶ್ರೀನಿವಾಸ್ ಪ್ರಸಾದ್, ಶಾಸಕ ಹಾಗೂಎಂಎಸ್‌ಐಎಲ್‌ ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಮರಿತಿಬ್ಬೇಗೌಡ, ಡಾ. ಡಿ.ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಮಲೆ ಮಹದೇಶ್ವರಬೆಟ್ಟ ಗ್ರಾಪಂ ಅಧ್ಯಕ್ಷ ಜಿ. ಅರ್ಚನಾ ಪ್ರಕಾಶ್ ಮುಖ್ಯ ಅಥಿತಿಗಳಾಗಿ ಪಾಲ್ಗೊಳ್ಳಲಿದ್ದಾರೆ. 2023ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರೊ. ಗೋಪಾಲ್ ಜಗದೀಶ್ ಮತ್ತು ಸಾಹಿತ್ಯ ಕ್ಷೇತ್ರದ ಪ್ರೊ. ಸಿ. ನಾಗಣ್ಣ ಅವರನ್ನು ಸನ್ಮಾನಿಸಲಾಗುವುದು. ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಎಸ್ಪಿ ಪದ್ಮಿನಿ ಸಾಹು, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಜಿ. ಸಂತೋಷ್‌ಕುಮಾರ್, ಎಡಿಸಿ ಗೀತಾ ಹುಡೇದ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಪ್ರಕಾಶ್ ಮತ್ತಿಹಳ್ಳಿ, ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಕನ್ನಡ ಮತ್ತು ಸಂಸೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಾಮರಾಜನಗರ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಇತರೆ ಪದಾಧಿಕಾರಿಗಳು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಬಾಕ್ಸ್‌... ಗಡಿನಾಡು ಕನ್ನಡ ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಬಯಲು ರಂಗಮಂದಿರದಲ್ಲಿ ಸಂಜೆ ನಡೆಯಲಿರುವ ಗಡಿನಾಡ ಕನ್ನಡ ಉತ್ಸವದಲ್ಲಿ ಸರಿಗಮಪ ಖ್ಯಾತಿಯ ಗಾಯಕರಿಂದ ಕನ್ನಡ ಸಂಗೀತೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಬೆಳಗ್ಗೆ 6.30ಗಂಟೆಗೆ ಕನ್ನಡ ಜಾಗೃತಿ ಜಾಥಾ, 9.30 ಗಂಟೆಗೆ ಇಂಡಿಗನತ್ತ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದತ್ತು ಪಡೆಯುವುದು, ಬೆಳಗ್ಗೆ 11 ಗಂಟೆಗೆ ಸಿ.ಪಿ ಕೃಷ್ಣಕುಮಾರ್ ಅವರಿಂದ ಜಿಲ್ಲಾ ಮಟ್ಟದ ಕವಿಗೋಷ್ಠಿ, ಮಧ್ಯಾಹ್ನ 12ಗಂಟೆಗೆ ತಾಲೂಕು ಜನಪದ ಸಾಹಿತ್ಯ ಪರಿಷತ್ ಅಧ್ಯಕ್ಷರಿಂದ ಜನಪದ ಸಾಹಿತ್ಯದ ಬಗ್ಗೆ ಕವಿಗೋಷ್ಠಿ, 1ಗಂಟೆಗೆ ಯಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಂದ ಗಡಿನಾಡು ಬಗ್ಗೆ ಉಪನ್ಯಾಸ, ಸಂಜೆ 4 ಗಂಟೆಗೆ ಕನ್ನಡ ಜನಪದ ಕಲಾ ಪ್ರಕಾರಗಳ ಮೆರವಣಿಗೆ ಹಾಗೂ ಸಾಂಸ್ಕೃತಿಕ ನಡಿಗೆ, 5 ಗಂಟೆಗೆ ಗಡಿನಾಡು ಕನ್ನಡ ಉತ್ಸವದ ವೇದಿಕೆ ಕಾರ್ಯಕ್ರಮ ಮತ್ತು 7 ಗಂಟೆಗೆ ಗಡಿನಾಡು ಕನ್ನಡ ಸಂಗೀತೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.