ಬ್ರಿಟಿಷರ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಉಲ್ಗುಲಾನ್ (ಮಹಾ ದಂಗೆ) ಹೋರಾಟವನ್ನು ಮುನ್ನಡೆಸಿ, ಆದಿವಾಸಿ ಸಮುದಾಯಗಳ ಭೂಮಿ, ಹಕ್ಕು ಮತ್ತು ಅಸ್ಮಿತೆಯ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಅಧಿಕೃತವಾಗಿ ಆಚರಿಸಬೇಕು ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಒತ್ತಾಯಿಸಿದ್ದಾರೆ.
ಕಾರ್ಕಳ: ಬ್ರಿಟಿಷರ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಉಲ್ಗುಲಾನ್ (ಮಹಾ ದಂಗೆ) ಹೋರಾಟವನ್ನು ಮುನ್ನಡೆಸಿ, ಆದಿವಾಸಿ ಸಮುದಾಯಗಳ ಭೂಮಿ, ಹಕ್ಕು ಮತ್ತು ಅಸ್ಮಿತೆಯ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾ ಅವರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಅಧಿಕೃತವಾಗಿ ಆಚರಿಸಬೇಕು ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಒತ್ತಾಯಿಸಿದ್ದಾರೆ.
1875ರ ನವೆಂಬರ್ 15ರಂದು ಜಾರ್ಖಂಡ್ನಲ್ಲಿ ಜನಿಸಿದ ಬಿರ್ಸಾ ಮುಂಡಾ ಅವರು ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಉಲ್ಗುಲಾನ್ ಹೋರಾಟದ ನೇತೃತ್ವ ವಹಿಸಿದ್ದರು. ಆದಿವಾಸಿಗಳ ಭೂಮಿ, ಹಕ್ಕು, ಸಂಸ್ಕೃತಿ ಮತ್ತು ಸ್ವಾಭಿಮಾನದ ಉಳಿವಿಗಾಗಿ ಹೋರಾಡಿದ ಅವರು 1900ರ ಜೂನ್ 9ರಂದು ರಾಂಚಿ ಜೈಲಿನಲ್ಲಿ ತಮ್ಮ 25ನೇ ವಯಸ್ಸಿನಲ್ಲಿ ನಿಧನರಾದರು.ದೇಶದ ಸ್ವಾತಂತ್ರ್ಯ ಹೋರಾಟ ಹಾಗೂ ಆದಿವಾಸಿ ಪ್ರತಿರೋಧದ ಇತಿಹಾಸದಲ್ಲಿ ಮಹತ್ವದ ಸ್ಥಾನ ಪಡೆದಿರುವ ಅವರ ಜನ್ಮದಿನವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಆಚರಿಸಬೇಕು ಎಂದು ಗಂಗಾಧರ ಗೌಡ ಆಗ್ರಹಿಸಿದ್ದಾರೆ.