ಮಲ್ಲನಮೂಲೆ ಮಠದ ಶ್ರೀ ಚನ್ನಬಸವ ಸ್ವಾಮೀಜಿ ಅವರು ಸಮಾಜ ಹಾಗೂ ಮಠಕ್ಕೆ ಕೊಟ್ಟ ಕೊಡುಗೆಗಳು ಅವಿಸ್ಮರಣೆಯ

ಕನ್ನಡಪ್ರಭ ವಾರ್ತೆ ನಂಜನಗೂಡು ಭಕ್ತರ ಸಹಕಾರವಿದ್ದರೆ ಮಠಗಳಿಂದ ಸಮಾಜಕ್ಕೆ ಹೆಚ್ಚಿನ ಕೊಡುಗೆ ನೀಡಲು ಸಾಧ್ಯ ಈ ನಿಟ್ಟಿನಲ್ಲಿ ಸುಕ್ಷೇತ್ರ ಮಲ್ಲನ ಮೂಲೆ ಮಠ ಯಶಸ್ವಿಯಾಗಿದ್ದು, ಇದರ ಜವಾಬ್ದಾರಿ ಹೊತ್ತಿದ್ದ ಶ್ರೀ ಚೆನ್ನಬಸವ ಸ್ವಾಮೀಜಿ ಅವರು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದಾರೆ ಎಂದು ಸುತ್ತೂರು ಮಠಾಧ್ಯಕ್ಷ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.ತಾಲೂಕಿನ ಮಲ್ಲನ ಮೂಲೆ ಶ್ರೀ ಗುರು ಕಂಬಳೀಶ್ವರ ಮಠದಲ್ಲಿ ಬುಧವಾರ ಆಯೋಜಿಸಿದ್ದ ಶ್ರೀ ಚನ್ನಬಸವ ಸ್ವಾಮಿಗಳವರ ಸಂಸ್ಮರಣೆ ಹಾಗೂ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರುಮಲ್ಲನಮೂಲೆ ಮಠದ ಶ್ರೀ ಚನ್ನಬಸವ ಸ್ವಾಮೀಜಿ ಅವರು ಸಮಾಜ ಹಾಗೂ ಮಠಕ್ಕೆ ಕೊಟ್ಟ ಕೊಡುಗೆಗಳು ಅವಿಸ್ಮರಣೆಯವಾಗಿದ್ದು, ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿರುವ ಶ್ರೀ ಇಮ್ಮಡಿ ಸಿದ್ದಲಿಂಗ ಸ್ವಾಮೀಜಿ ಅವರು ಮುಂದಿನ ದಿನಗಳಲ್ಲಿ ಮಠವನ್ನು ಇನ್ನೂ ಹೆಚ್ಚು ಅಭಿವೃದ್ಧಿಪಡಿಸುವಂತೆ ಭಕ್ತರು ಸಂಪೂರ್ಣ ಸಹಕಾರ ಕೊಡಬೇಕಿದೆ ಎಂದು ಅವರು ಹೇಳಿದರು.ತುಮಕೂರು ಸಿದ್ದಗಂಗಾ ಕ್ಷೇತ್ರದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಮಲ್ಲನ ಮೂಲೆ ಮಠದ 5ನೇ ಪೀಠಾಧ್ಯಕ್ಷರಾಗಿದ್ದ ಶ್ರೀ ಚೆನ್ನಬಸವ ಸ್ವಾಮೀಜಿ ಅವರು ಮಠಕ್ಕೆ ಭಕ್ತರ ಪ್ರೀತಿ, ಶ್ರದ್ಧೆ ಹಾಗೂ ಭಕ್ತಿಯನ್ನು ಹರಿಯುವಂತೆ ನೋಡಿಕೊಂಡಿದ್ದರು ಹೀಗಾಗಿ ಸ್ವಾಮೀಜಿಯವರು ಭೌತಿಕವಾಗಿ ಮರೆಯಾಗಿದ್ದರೂ ಭಕ್ತರ ಮನಸ್ಸಿನಲ್ಲಿ ಸದಾ ಉಳಿಯಲಿದ್ದಾರೆ ಎಂದು ಹೇಳಿದರು.ಮಾಜಿ ಶಾಸಕ ಬಿ. ಹರ್ಷವರ್ಧನ್ ಮಾತನಾಡಿ, ಸುಕ್ಷೇತ್ರ ಮಲ್ಲನ ಮೂಲೆ ಮಠದ ಶ್ರೀ ಚೆನ್ನಬಸವ ಸ್ವಾಮೀಜಿಗಳವರು ಕಾಯಕ ಹಾಗೂ ದಾಸೋಹದ ಮಹತ್ವವನ್ನು ಸಮಾಜಕ್ಕೆ ತಿಳಿಸಿಕೊಡುವ ಜೊತೆಗೆ ಭಕ್ತರ ಸಂಕಷ್ಟಗಳನ್ನು ಪರಿಹರಿಸಲು ತಮ್ಮ ನೆರವನ್ನು ನೀಡುತ್ತಿದ್ದರು. ಇದೀಗ ಮಠದ ನೂತನ ಪೀಠಾಧಿಪತಿಯಾಗಿರುವ ಶ್ರೀ ಇಮ್ಮಡಿ ಸಿದ್ದಲಿಂಗ ಸ್ವಾಮೀಜಿಗಳ ಸೇವಾ ಕಾರ್ಯಗಳನ್ನು ಕೈಗೊಳ್ಳಲು ನಾವೆಲ್ಲರೂ ಬೆಂಬಲವಾಗಿ ನಿಲ್ಲಬೇಕಿದೆ ಎಂದು ಹೇಳಿದರು.ನಿವೃತ್ತ ಪ್ರಾಧ್ಯಾಪಕ ಪ್ರೊ.ಡಿ.ಎಸ್. ಸದಾಶಿವಮೂರ್ತಿ ಮಾತನಾಡಿದರು. ಶ್ರೀ ಗುರು ಕಂಬಳೀಶ್ವರ ಮಠಾಧ್ಯಕ್ಷ ಶ್ರೀ ಇಮ್ಮಡಿ ಸಿದ್ಧಲಿಂಗ ಸ್ವಾಮೀಜಿ, ಮಲೆ ಮಹದೇಶ್ವರ ಬೆಟ್ಟದ ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಬೆಟ್ಟದಪುರದ ಚೆನ್ನಬಸವ ದೇಶಿಕೇಂದ್ರ ಸ್ವಾಮೀಜಿ, ದೇವನೂರು ಮಠಾದ್ಯಕ್ಷ ಶ್ರೀ ಮಹಾಂತ ಸ್ವಾಮೀಜಿ, ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ನಿರಂಜನ್ ಕುಮಾರ್, ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ, ಪ್ರಥಮ ಗುತ್ತಿಗೆದಾರ ಯು.ಎನ್.ಪದ್ಮನಾಭ ರಾವ್ ಭಾಗವಹಿಸಿದ್ದರು.