ಸಾರಾಂಶ
ಮಲ್ಲಮ್ಮನ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ
ಲಕ್ಷ್ಮೇಶ್ವರ
ಹೇಮರೆಡ್ಡಿ ಮಲ್ಲಮ್ಮನ ಜೀವನ ನಮಗೆ ಮಾರ್ಗದರ್ಶನ ನೀಡುವಂತಿದೆ. ಮಲ್ಲಮ್ಮ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಬದುಕು ಸಾಗಿಸಬೇಕು ಎಂದು ಶಿಗ್ಲಿ ಗ್ರಾಪಂ ಉಪಾಧ್ಯಕ್ಷ ಯಲ್ಲಪ್ಪ ತಳವಾರ ಹೇಳಿದರು.ಶುಕ್ರವಾರ ಸಮೀಪದ ಶಿಗ್ಲಿ ಗ್ರಾಮದ ಗ್ರಾಪಂ ಕಚೇರಿಯಲ್ಲಿ ಹೇಮರೆಡ್ಡಿ ಮಲ್ಲಮ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಿ ಮಾತನಾಡಿದರು.
ಹೇಮರೆಡ್ಡಿ ಮಲ್ಲಮ್ಮ ತನ್ನ ಜೀವನದಲ್ಲಿ ಅನುಭವಿಸಿದ ಕಷ್ಟನಷ್ಟಗಳಿಗೆ ಹೆದರದೆ ಆದರ್ಶದ ಬದುಕನ್ನು ಬದುಕಿದರು. ಮಲ್ಲಮ್ಮನ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.ಈ ವೇಳೆ ರಾಜು ಯತ್ತಿನಹಳ್ಳಿ, ಶಂಕರಪ್ಪ ನಡುವಿನಮನಿ, ಶಂಕರಪ್ಪ ಗೋಣೆಪ್ಪನವರ, ಶಂಕರಪ್ಪ ಶಿರಹಟ್ಟಿ ಹಾಗೂ ಗ್ರಾಪಂ ಸಿಬ್ಬಂದಿ ವರ್ಗ ಇದ್ದರು.