ಮಲ್ಲಿಗೆರೆ ಡೇರಿ ಚುನಾವಣೆ: 10 ಸ್ಥಾನಗಳಲ್ಲೂ ಜೆಡಿಎಸ್ ಬೆಂಬಲಿತರು ಆಯ್ಕೆ

| Published : Mar 21 2025, 12:31 AM IST

ಮಲ್ಲಿಗೆರೆ ಡೇರಿ ಚುನಾವಣೆ: 10 ಸ್ಥಾನಗಳಲ್ಲೂ ಜೆಡಿಎಸ್ ಬೆಂಬಲಿತರು ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಪಾಂಡವಪುರ ತಾಲೂಕಿನ ಮಲ್ಲಿಗೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 10 ಸ್ಥಾನಗಳಲ್ಲೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸುವ ಮೂಲಕ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಮಲ್ಲಿಗೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 10 ಸ್ಥಾನಗಳಲ್ಲೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸುವ ಮೂಲಕ ಆಯ್ಕೆಯಾಗಿದ್ದಾರೆ.

ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಮತ್ತು ರೈತಸಂಘ-ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ಸಾಕಷ್ಟು ಪೈಪೋಟಿ ಎದುರಾಗಿತ್ತು. 10 ಸ್ಥಾನಕ್ಕೆ 20 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು.

ಸಂಘದ ಆವರಣದಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಎಲ್ಲಾ 10 ಸ್ಥಾನಗಳಲ್ಲೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸುವ ಮೂಲಕ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಕೈಬಲಪಡಿಸಿದ್ದಾರೆ.

ಚುನಾವಣೆಯಲ್ಲಿ ರೈತಸಂಘ- ಕಾಂಗ್ರೆಸ್ ಬೆಂಬಲಿತ ಎಲ್ಲಾ ಅಭ್ಯರ್ಥಿಗಳು ಸೋಲುಂಡಿರುವುದು ಹಾಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯರಿಗೆ ಮುಖಭಂಗವಾಗಿದೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿದ್ದಂತೆಯೇ ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡಿದರು.

ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾದ ಎಂ.ಆರ್.ಅನಿತಾ, ಎಂ.ಬಿ.ಅಶೋಕ್, ಎಂ.ಎಸ್.ದೇವರಾಜು, ಪುಟ್ಟರಾಮೇಗೌಡ, ಎಂ.ಕೆ.ಮಹೇಶ್, ಮಹೇಂದ್ರಚಾರಿ, ಎಸ್.ಎನ್.ರಘು, ಎಂ.ಬಿ.ರಾಜೇಗೌಡ, ಎ.ಎಸ್.ವಿನುತ, ಎಂ.ಡಿ.ಹಲಗೇಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿದ್ದಂತೆಯೇ, ಬೆಂಬಲಿಗರು ನೂತನ ನಿರ್ದೇಶಕರನ್ನು ಅಭಿನಂಧಿಸಿದರು.

ತಾಪಂ ಮಾಜಿ ಅಧ್ಯಕ್ಷ ಎಂ.ಸಿ.ಯಶವಂತ್‌ಕುಮಾರ್ ಮಾತನಾಡಿ, ಡೇರಿ ಸಂಘದ ಚುನಾವಣೆಯಲ್ಲಿ ಹಾಲು ಉತ್ಪಾದಕ ರೈತರು, ಷೇರುದಾರರು ನಮ್ಮ ನಾಯಕ ಸಿ.ಎಸ್.ಪುಟ್ಟರಾಜು ಅವರ ಅಭಿವೃದ್ಧಿ ಕೆಲಸಕಾರ್‍ಯಗಳಿಗೆ ಮೆಚ್ಚಿ ಜೆಡಿಎಸ್ ಬೆಂಬಲಿತರನ್ನು ಗೆಲ್ಲಿಸಿದ್ದಾರೆ ಎಂದರು.

ಕ್ಷೇತ್ರದಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಬಹುತೇಕ ಕಡೆ ಜೆಡಿಎಸ್ ಬೆಂಬಲಿತರು ಆಯ್ಕೆಯಾಗಿದ್ದು, ಮುಂದಿನ ದಿನಗಳಲ್ಲಿ ಡೇರಿಯ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುವ ಮೂಲಕ ಡೇರಿ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಈ ವೇಳೆ ಗ್ರಾಪಂ ಮಾಜಿ ಅಧ್ಯಕ್ಷರಾದ ರವಿಕರ, ಚಂದ್ರೇಗೌಡ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಎಂ.ಎಸ್.ಜಗದೀಶ್, ಡೇರಿ ಮಾಜಿ ಅಧ್ಯಕ್ಷರಾದ ಎಂ.ಬಿ.ಸುರೇಶ್, ನಾಗಣ್ಣ, ಯಜಮಾನರಾದ ರಾಜೇಶ್ ಸೇರಿದಂತೆ ಗ್ರಾಮದ ಯಜಮಾನರ, ಮುಖಂಡರು, ಯುವಕರು ಹಾಜರಿದ್ದರು.