ನಾಳೆ ಸುರೇಶ್ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರ

| Published : Apr 21 2024, 02:18 AM IST

ನಾಳೆ ಸುರೇಶ್ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರ
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಪರ ಪ್ರಚಾರ ನಡೆಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಏ.22ಕ್ಕೆ ನಗರಕ್ಕೆ ಆಗಮಿಸುತ್ತಿದ್ದು, ತಾಲೂಕಿನ ದಲಿತ ಮತ್ತು ಹಿಂದುಳಿದ ಸಮುದಾಯದವರು ಹಾಗೂ ಖರ್ಗೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಉಪಾಧ್ಯಕ್ಷ ಜಯಕಾಂತ್ ಚಾಲುಕ್ಯ ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರ ಪ್ರಚಾರಕ್ಕೆ ದಲಿತರ ನಡೆ ಕಾಂಗ್ರೆಸ್ ಕಡೆ ಎಂಬ ಸಮಾವೇಶವನ್ನು ಏ.22ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ನಗರದ ಮಹದೇಶ್ವರ ದೇವಸ್ಥಾನದ ಹತ್ತಿರದ ಕೆ.ಎಚ್.ಬಿ.ಬಡಾವಣೆಯಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಪ್ರಚಾರ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವ ಎಚ್.ಸಿ.ಮಹದೇವಪ್ಪ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ. ದಲಿತರ ಸ್ವಾಭಿಮಾನದ ಸಂಕೇತವಾದ ಈ ಸಮಾವೇಶದಲ್ಲಿ ೩೦ ಸಾವಿರಕ್ಕೂ ಹೆಚ್ಚು ದಲಿತರು ಮತ್ತು ಹಿಂದುಳಿದ ಸಮುದಾಯ ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಮುಖಂಡರಾದ ಸಿದ್ದರಾಮಯ್ಯ ಹಾಗೂ ಬಿವಿಎಸ್ ಕುಮಾರ್ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ನಂತರ ಪ್ರಥಮ ಬಾರಿಗೆ ಚನ್ನಪಟ್ಟಣಕ್ಕೆ ಆಗಮಿಸುತ್ತಿದ್ದು ಅವರಿಗೆ ಅಭೂತಪೂರ್ವ ಸ್ವಾಗತ ನೀಡಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರಿಗೆ ಸ್ವಾಭಿಮಾನದ ಮತ ನೀಡಿ ಗೆಲುವು ತಂದು ಕೊಡುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್ ದಲಿತ ಮುಖಂಡರಾದ ಪಾಪಣ್ಣ, ಚಕ್ಕೆರೆ ಲೋಕೇಶ್, ವಂದಾರಗುಪ್ಪೆ ರಾಜೇಶ್, ವೆಂಕಟೇಶ್,ಅಪ್ಪಗೆರೆ ಶಿವಮೂರ್ತಿ, ಶ್ರೀನಿವಾಸ್‌ಮೂರ್ತಿ, ಮಂಜು, ಭರತ್, ಶಿವರಾಂ, ಜಗದೀಶ್, ಸ್ವಾಮಿ, ಹೊಂಬಾಳಯ್ಯ ಉಪಸ್ಥಿತರಿದ್ದರು.ಪೊಟೋ೨೦ಸಿಪಿಟಿ೨: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ದಲಿತ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ದಲಿತರ ನಡೆ ಕಾಂಗ್ರೆಸ್ ಕಡೆಗೆ ಕರಪತ್ರ ಪ್ರದರ್ಶಿಸಿದರು.