ಸಾರಾಂಶ
ಅರಕಲಗೂಡು ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಅಲ್ಲಾಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಸ್.ಪಿ.ಮಲ್ಲಿಕಾರ್ಜುನ ಅವರು ಸರ್ವಾನುಮತದಿಂದ ಆಯ್ಕೆಗೊಂಡರು. ಸಭೆಯಲ್ಲಿ ನಿರ್ದೇಶಕರಾದ ಸರಸ್ವತಿ, ಮಂಜೇಗೌಡ, ನಾಗಮ್ಮ, ಸುಮಿತ್ರಾ, ಮಮತಾ ಮುಂತಾದವರು ಹಾಜರಿದ್ದರು. ನನಗೆ ಕಡಿಮೆ ಅವಧಿಯ ಅಧ್ಯಕ್ಷ ಹುದ್ದೆ ದೊರೆತಿರಬಹುದು. ತಾಲೂಕಿನ ಶಿಕ್ಷಕರ ಸಮಸ್ಯೆ ನಿವಾರಣೆ ಮತ್ತು ಆಗಬೇಕಿರುವ ಕಾರ್ಯಗಳನ್ನು ನಿರ್ವಹಿಸಲಾಗುವುದು. ಎಲ್ಲಾ ನಿರ್ದೇಶಕರು, ಶಿಕ್ಷಕರ ಸಹಕಾರ ಪಡೆಯಲಾಗುವುದು ಎಂದು ನೂತನ ಅಧ್ಯಕ್ಷ ಮಲ್ಲಿಕಾರ್ಜುನ್ ತಿಳಿಸಿದರು.
ಅರಕಲಗೂಡು: ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಅಲ್ಲಾಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಸ್.ಪಿ.ಮಲ್ಲಿಕಾರ್ಜುನ ಅವರು ಸರ್ವಾನುಮತದಿಂದ ಆಯ್ಕೆಗೊಂಡರು.
ಶಿಕ್ಷಕರ ಭವನದ ಆವರಣದಲ್ಲಿ ನಡೆದ ಸಭೆಯಲ್ಲಿ ಸಂಘದ ಎಲ್ಲಾ ನಿರ್ದೇಶಕರು ಮಲ್ಲಿಕಾರ್ಜುನ್ ಅವರ ಆಯ್ಕೆಯನ್ನು ಒಮ್ಮತದಿಂದ ಘೋಷಿಸಿದರು. ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಸರಸ್ವತಿ ಅವರು ವೈಯಕ್ತಿಕ ಕಾರಣದಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ತೆರವಾದ ಅಧ್ಯಕ್ಷರ ಆಯ್ಕೆಗೆ ಸಭೆ ಸೇರಿ ಅಂತಿಮ ಅವಧಿಗೆ ಸರ್ವಾನುಮತದಿಂದ ಆಯ್ಕೆ ನಡೆದಿದೆ. ಸಭೆಯಲ್ಲಿ ನಿರ್ದೇಶಕರಾದ ಸರಸ್ವತಿ, ಮಂಜೇಗೌಡ, ನಾಗಮ್ಮ, ಸುಮಿತ್ರಾ, ಮಮತಾ ಮುಂತಾದವರು ಹಾಜರಿದ್ದರು. ನನಗೆ ಕಡಿಮೆ ಅವಧಿಯ ಅಧ್ಯಕ್ಷ ಹುದ್ದೆ ದೊರೆತಿರಬಹುದು. ತಾಲೂಕಿನ ಶಿಕ್ಷಕರ ಸಮಸ್ಯೆ ನಿವಾರಣೆ ಮತ್ತು ಆಗಬೇಕಿರುವ ಕಾರ್ಯಗಳನ್ನು ನಿರ್ವಹಿಸಲಾಗುವುದು. ಎಲ್ಲಾ ನಿರ್ದೇಶಕರು, ಶಿಕ್ಷಕರ ಸಹಕಾರ ಪಡೆಯಲಾಗುವುದು ಎಂದು ನೂತನ ಅಧ್ಯಕ್ಷ ಮಲ್ಲಿಕಾರ್ಜುನ್ ತಿಳಿಸಿದರು.