ಸಾರಾಂಶ
ದೇವರಿಗೆ ವಿಶೇಷ ಅಲಂಕಾರ, ದೇವರ ಸನ್ನಿಧಿಯಲ್ಲಿ ಭಜನಾ ಕಾರ್ಯಕ್ರಮ, ದೇವಿ ಪಾರಾಯಣ, ಹೂವಿನ ಪೂಜೆ ಹಾಗೂ ವಿವಿಧ ಧಾರ್ಮಿಕ ಪೂಜಾ ವಿಧಾನಗಳು ಸಂದೇಶ್ ಭಟ್ ನೇತೃತ್ವದಲ್ಲಿ ನಡೆಯಿತು. ಸಾಮೂಹಿಕ ದೇವತಾ ಪ್ರಾರ್ಥನೆ, ಕುಮಾರಿ ಪೂಜೆ, ಸುವಾಸಿನಿ ಅರಾಧನೆ, ಪ್ರಸನ್ನ ಪೂಜೆ, ಪೂರ್ಣಾಹುತಿ, ಮಹಾಪೂಜೆ ಬಳಿಕ ಮಹಾಅನ್ನಸಂತರ್ಪಣೆ ನಡೆಯಿತು.
ಕನ್ನಡಪ್ರಭ ವಾರ್ತೆ ಮಲ್ಪೆ
ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪರ್ವಕಾಲದಲ್ಲಿ ಚಂಡಿಕಾ ಯಾಗ ನಡೆಯಿತು.ಈ ಸಂದರ್ಭ ದೇವರಿಗೆ ವಿಶೇಷ ಅಲಂಕಾರ, ದೇವರ ಸನ್ನಿಧಿಯಲ್ಲಿ ಭಜನಾ ಕಾರ್ಯಕ್ರಮ, ದೇವಿ ಪಾರಾಯಣ, ಹೂವಿನ ಪೂಜೆ ಹಾಗೂ ವಿವಿಧ ಧಾರ್ಮಿಕ ಪೂಜಾ ವಿಧಾನಗಳು ಸಂದೇಶ್ ಭಟ್ ನೇತೃತ್ವದಲ್ಲಿ ನಡೆಯಿತು. ಸಾಮೂಹಿಕ ದೇವತಾ ಪ್ರಾರ್ಥನೆ, ಕುಮಾರಿ ಪೂಜೆ, ಸುವಾಸಿನಿ ಅರಾಧನೆ, ಪ್ರಸನ್ನ ಪೂಜೆ, ಪೂರ್ಣಾಹುತಿ, ಮಹಾಪೂಜೆ ಬಳಿಕ ಮಹಾಅನ್ನಸಂತರ್ಪಣೆ ನಡೆಯಿತು. ಶ್ರೀ ದೇವಿಯ ಸನ್ನಿಧಿಯಲ್ಲಿ ರಾತ್ರಿ ಲಲಿತಾ ಸಹಸ್ರನಾಮ ಪಾರಾಯಣ ನಡೆಸಲಾಯಿತು. ಊರ ಪರಊರ ಮಂಡಳಿಯ ಸದಸ್ಯರು ಭಜನಾ ಸಂಕೀರ್ತನೆ ನಡೆಸಿಕೊಟ್ಟರು. ನೂರಾರು ಭಕ್ತರ ಸಹಕಾರದಲ್ಲಿ ನಗರ ಭಜನೆಯೂ ಜರುಗಿತು.ಈ ಸಂದರ್ಭ ದೇವಳದ ಆಡಳಿತ ಮೊಕ್ತೇಸರ ಎಂ. ಶಾಂತಾರಾಮ್ ಪೈ, ಶರತ್ ಭಟ್, ರಾಮದಾಸ್ ಭಟ್ ಬನ್ನಂಜೆ, ಕಾರ್ಯದರ್ಶಿ ಉಮೇಶ್ ನಾಯಕ್, ಗಣೇಶ್ ಪೈ, ಸೇವಾದಾರರು, ಜಿ.ಎಸ್.ಬಿ. ಸೇವಾ ಸಮಾಜದ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯರು, ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.