ಸಾರಾಂಶ
ಮಲ್ಪೆ - ಆದಿಉಡುಪಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ವಿವಿಧ ಸಲಹೆ, ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಮಲ್ಪೆ - ಆದಿಉಡುಪಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಲ್ಪೆ ಫಿಶರೀಸ್ ಶಾಲೆಯ ಅಭಿವೃದ್ಧಿ ಸಮಿತಿ ಮನವಿ ಮೇರೆಗೆ ಹೆದ್ದಾರಿ ಕಾಮಗಾರಿಗಾಗಿ ತೆರವು ಮಾಡಿರುವ ಶಾಲೆಯ ಆವರಣ ಗೋಡೆ ಕೆಡವಿದ್ದು, ಶಾಲೆಯ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ತಕ್ಷಣ ಮರು ನಿರ್ಮಾಣ ಮಾಡುವಂತೆ ರಾಷ್ಟೀಯ ಹೆದ್ದಾರಿ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.ಮಲ್ಪೆ ಏಳೂರು ಮೊಗವೀರ ಭವನದ ಬಳಿ ಈ ಹಿಂದೆ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಿದ್ದ ಬಸ್ ನಿಲ್ದಾಣವನ್ನು ತೆರವು ಮಾಡಿದ್ದು, ಈಗ ಯಾವುದೇ ಬಸ್ ನಿಲ್ದಾಣವಿಲ್ಲದೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಬಿಸಿಲು ಗಾಳಿ ಮಳೆಗೆ ರಕ್ಷಣೆ ಇಲ್ಲದೆ ತೊಂದರೆ ಎದುರಿಸುತ್ತಿದ್ದು, ಬಾಕಿ ಉಳಿದಿರುವ ಮರ ತೆರವು ಮಾಡಿ ತಾತ್ಕಾಲಿಕ ಬಸ್ಸು ನಿಲ್ದಾಣ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.ಮುಂದಿನ ಹಂತದಲ್ಲಿ ಕಟ್ಟಡಗಳ ತೆರವು ಸಂದರ್ಭದಲ್ಲಿ ಕಟ್ಟಡಗಳ ಮಾಲೀಕರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಹಾಗೂ ಸಾರ್ವಜನಿಕರು ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಹಕಾರ ನೀಡುವಂತೆ ತಿಳಿಸಿದರು.ನಗರಸಭಾ ಸದಸ್ಯರಾದ ಸುಂದರ ಕಲ್ಮಾಡಿ, ಎಡ್ಲಿನ್ ಕರ್ಕಡ, ಶ್ರೀಶ ಕೊಡವೂರು, ಲಕ್ಷ್ಮೀ ಮಂಜುನಾಥ, ರಾಷ್ಟೀಯ ಹೆದ್ದಾರಿ ಇಲಾಖೆಯ ಮಂಜುನಾಥ ನಾಯಕ್, ಸ್ಥಳೀಯ ಮುಖಂಡರಾದ ಮಂಜು ಕೊಳ, ಸುರೇಶ್ ಕುಂದರ್, ಫೀಶರೀಶ್ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪ್ರಮುಖರು ಇದ್ದರು.