ಮಲ್ಪೆ: ಮೀನುಗಾರರ ಸಹಕಾರಿ ಸಂಘಗಳಿಗೆ ತರಬೇತಿ ಸಂಪನ್ನ

| Published : Jul 21 2025, 01:30 AM IST

ಸಾರಾಂಶ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಮಲ್ಪೆ ಯಾಂತ್ರಿಕ ದೋಣಿ (ಟ್ರಾಲ್) ಮೀನುಗಾರರ ಪ್ರಾಥಮಿಕ ಸಹಕಾರ ಮಲ್ಪೆ ಹಾಗೂ ಜಿಲ್ಲಾ ಸಹಕಾರ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲೆಯ ಪ್ರಾಥಮಿಕ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು/ಮುಖ್ಯ ಕಾರ್ಯನಿರ್ವಾಹಕರಿಗೆ ಆಡಳಿತ ನಿರ್ವಹಣೆ ಕುರಿತು ಜಿಲ್ಲಾಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮದ ಶನಿವಾರ ಮಲ್ಪೆಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಮಲ್ಪೆ ಯಾಂತ್ರಿಕ ದೋಣಿ (ಟ್ರಾಲ್) ಮೀನುಗಾರರ ಪ್ರಾಥಮಿಕ ಸಹಕಾರ ಮಲ್ಪೆ ಹಾಗೂ ಜಿಲ್ಲಾ ಸಹಕಾರ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲೆಯ ಪ್ರಾಥಮಿಕ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು/ಮುಖ್ಯ ಕಾರ್ಯನಿರ್ವಾಹಕರಿಗೆ ಆಡಳಿತ ನಿರ್ವಹಣೆ ಕುರಿತು ಜಿಲ್ಲಾಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮದ ಶನಿವಾರ ಮಲ್ಪೆಯಲ್ಲಿ ನಡೆಯಿತು.ಈ ತರಬೇತಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಭಾಗವಹಿಸಿ ಈ ತರಬೇತಿ ಕಾರ್ಯಾಗಾರದ ಮೂಲಕ ಮೀನುಗಾರರ ಸಹಕಾರಿ ಸಂಘಗಳ ಕಾರ್ಯಚಟುವಟಿಕೆಗಳಿಗೆ ವಿಶೇಷ ಶಕ್ತಿ ತುಂಬಲಿದೆ ಎಂದು ಆಶಯ ವ್ಯಕ್ತಪಡಿಸಿದರು.ತರಬೇತಿ ಕಾರ್ಯಾಗಾರವನ್ನು ಮಲ್ಪೆ ಯಾಂತ್ರಿಕ ದೋಣಿ ಮೀನುಗಾರರ ಸಹಕಾರಿ ಸಂಘ ಅಧ್ಯಕ್ಷ ಶ್ರೀರಾಮಚಂದ್ರ ಕುಂದರ್ ಉದ್ಘಾಟಿಸಿದರು.ಸಮಾರಂಭದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್, ಯಾಂತ್ರಿಕ ದೋಣಿ ಸಹಕಾರಿ ಸಂಘದ ಉಪಾಧ್ಯಕ್ಷ ಪ್ರಕಾಶ್ ಬಂಗೇರ, ಸಹಕಾರಿ ಇಲಾಖೆಯ ಸಹಾಯಕ ನಿಬಂಧಕ ಸುಧೀರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.