ಹೊಸಕೋಟೆ: ಕೊರೊನಾ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಮಾಲೂರಿನಿಂದ ಶಿವನಾಪುರ, ಚಿಕ್ಕನಹಳ್ಳಿ, ನಂದಗುಡಿ ಮಾರ್ಗವಾಗಿ ಚಿಂತಾಮಣಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸೇವೆಯನ್ನು ಕೆಆರ್‌ಎಸ್ ಪಕ್ಷದ ಮನವಿಗೆ ಸ್ಪಂದಿಸಿ ಮಾಲೂರು ಘಟಕದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಪುನಾರಂಭಿಸಿದ್ದಾರೆ ಎಂದು ಕೆಆರ್‌ಎಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದರು
ಹೊಸಕೋಟೆ: ಕೊರೊನಾ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಮಾಲೂರಿನಿಂದ ಶಿವನಾಪುರ, ಚಿಕ್ಕನಹಳ್ಳಿ, ನಂದಗುಡಿ ಮಾರ್ಗವಾಗಿ ಚಿಂತಾಮಣಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸೇವೆಯನ್ನು ಕೆಆರ್‌ಎಸ್ ಪಕ್ಷದ ಮನವಿಗೆ ಸ್ಪಂದಿಸಿ ಮಾಲೂರು ಘಟಕದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಪುನಾರಂಭಿಸಿದ್ದಾರೆ ಎಂದು ಕೆಆರ್‌ಎಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದರು. ನಂದಗುಡಿ ಹೋಬಳಿಯ ಶಿವನಾಪುರ ಗ್ರಾಮದಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಕೆಆರ್‌ಎಸ್ ಜಿಲ್ಲಾ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿ, ಬಸ್ ಸೇವೆ ಸ್ಥಗಿತಗೊಂಡಿದ್ದರಿಂದ ಈ ಭಾಗದ ಗ್ರಾಮಸ್ಥರಿಗೆ ತೊಂದರೆಯಾಗಿತ್ತು. ಮುಖ್ಯವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಮಸ್ಯೆಯನ್ನು ಪಕ್ಷದ ಪದಾಧಿಕಾರಿಗಳು ಮಾಲೂರು ಕೆಎಸ್‌ಆರ್‌ಟಿಸಿ ಡಿಪೋ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೆವು ಎಂದರು. ತಾಲೂಕು ಸಮಿತಿ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಶ್ರೀನಿವಾಸ ಮೂರ್ತಿ, ಪ್ರಧಾನ ಕಾರ್ಯದರ್ಶಿ ರಾಜಣ್ಣ, ಜಂಟಿ ಕಾರ್ಯದರ್ಶಿಗಳಾದ ಮುಕ್ತಿಯಾರ್, ಮಂಜುನಾಥ್, ಸೋಮಶೇಖರ್, ಸಂಘಟನಾ ಕಾರ್ಯದರ್ಶಿಗಳಾದ ಸೌಮ್ಯ, ಅಂಜಿನಪ್ಪ, ತಾಲೂಕು ಮುಖಂಡರಾದ ಶ್ರೀನಿವಾಸ್ ಸೂಲಿಬೆಲೆ, ಶ್ರೀನಿವಾಸ್ ಜಡಿಗೇನಹಳ್ಳಿ, ಜಬೀವುಲ್ಲಾ, ಮಂಜುನಾಥ್ ಶಿವನಾಪುರ ಇತರರು ಉಪಸ್ಥಿತರಿದ್ದರು.