ಕಡಣಿ ಸಾಹಿತ್ಯ ಸಮ್ಮೇಳನ ದತ್ತಿಯಿಂದ ಮಮತಾ ಮುಳಸಾವಳಗಿ (ಗುಮಶೆಟ್ಟಿ) ಅವರ ಮಮತೆಯ ಮರುಳಾರಾಧ್ಯ ಶತವಚನಗಳು ಕೃತಿಯು ಜಿಲ್ಲಾಮಟ್ಟದ ಅತ್ಯುತ್ತಮ ಕೃತಿ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಅಲ್ಲದೆ ಕಡಣಿ ಗುರುವಂದನಾ ದತ್ತಿಯಿಂದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ತಾರಾಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕ ಅಶೋಕ ಬಡಿಗೇರ ಅವರನ್ನು ಆಯ್ಕೆ ಮಾಡಲಾಗಿದೆ.
ಕನ್ನಡಪ್ರಭ ವಾರ್ತೆ ವಿಜಯಪುರ
ಕಡಣಿ ಸಾಹಿತ್ಯ ಸಮ್ಮೇಳನ ದತ್ತಿಯಿಂದ ಮಮತಾ ಮುಳಸಾವಳಗಿ (ಗುಮಶೆಟ್ಟಿ) ಅವರ ಮಮತೆಯ ಮರುಳಾರಾಧ್ಯ ಶತವಚನಗಳು ಕೃತಿಯು ಜಿಲ್ಲಾಮಟ್ಟದ ಅತ್ಯುತ್ತಮ ಕೃತಿ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಅಲ್ಲದೆ ಕಡಣಿ ಗುರುವಂದನಾ ದತ್ತಿಯಿಂದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ತಾರಾಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕ ಅಶೋಕ ಬಡಿಗೇರ ಅವರನ್ನು ಆಯ್ಕೆ ಮಾಡಲಾಗಿದೆ.ಈ ಪ್ರಶಸ್ತಿಯನ್ನು ಮಾ.೧೫ ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಬೆಳಗ್ಗೆ ೧೧ ಗಂಟೆಗೆ ಜರುಗುವುದು. ಕಲಕೇರಿ ಹಿರೇಮಠ ಸಂಸ್ಥಾನದ ಸಿದ್ದರಾಮ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ವಿಶ್ರಾಂತ ಪ್ರಾಚಾರ್ಯ ಡಾ.ವಿ.ಎಂ.ಬಾಗಾಯತ ಉದ್ಘಾಟಕರಾಗಿ ಆಗಮಿಸಲಿದ್ದಾರೆ. ವಿಶ್ರಾಂತ ಪ್ರಾಚಾರ್ಯ ಡಿ.ಎಂ.ಘೋರ್ಪಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಗೌರವ ಕಾರ್ಯದರ್ಶಿ ಶಿಲ್ಪಾ ಭಸ್ಮೆ ಹಾಗೂ ತಿಕೋಟಾ ತಾಲೂಕು ಕಸಾಪ ಅಧ್ಯಕ್ಷ ಸಿದ್ರಾಮಯ್ಯ ಲಕ್ಕುಂಡಿಮಠ ಉಪನ್ಯಾಸ ನೀಡಲಿದ್ದಾರೆ. ಆಲಮೇಲ ತಾಲೂಕು ಕಸಾಪ ಅಧ್ಯಕ್ಷ ಶಿವಶರಣ ಗುಂದಗಿ, ಆಲಮೇಲ ಗೌರವ ಕೋಶಾಧ್ಯಕ್ಷ ಅಶೋಕ ಕೊಳಾರಿ, ಆಲಮೇಲ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಡಾ.ರಮೇಶ ಕತ್ತಿ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ ಎಂದು ಪದಾಧಿಕಾರಿಗಳಾದ ಹಾಸಿಂಪೀರ ವಾಲಿಕಾರ, ಅಭಿಷೇಕ ಚಕ್ರವರ್ತಿ ಹಾಗೂ ಜಯಶ್ರೀ ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.