ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಬಂಧನ

| Published : Jan 20 2025, 01:33 AM IST

ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಬಂಧನ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು: ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಕೋವಿ ವಶಪಡಿಸಿಕೊಂಡಿದೆ.

ಚಿಕ್ಕಮಗಳೂರು: ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಕೋವಿ ವಶಪಡಿಸಿಕೊಂಡಿದೆ.ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಸರ್ವೇ ಸಂಖ್ಯೆ 37 ರಲ್ಲಿ ಕೂತನ್ಕುಲ್ ಎಸ್ಟೇಟ್ ನಲ್ಲಿ ಭಾನುವಾರ ನಸುಕಿನಲ್ಲಿ ತೋಟದ ರೈಟರ್ ದೇವಯ್ಯ ಕಡವೆ ಶಿಕಾರಿ ಮಾಡಿದ್ದ.ಶಿಕಾರಿ ಬಳಿಕ ಮಾಂಸವನ್ನು ತುಂಡು ಮಾಡುತ್ತಿದ್ದಾಗ ಅರಣ್ಯ ಸಂಚಾರಿ ದಳದವರು ದಾಳಿ ಮಾಡಿ ದೇವಯ್ಯನನ್ನು ಬಂಧಿಸಿ ಸಾಂಬಾರ್ ಜಿಂಕೆಯ ಮಾಂಸ ಮತ್ತು ಚರ್ಮ, ಚೂರಿ ಹಾಗೂ ಬೇಟೆಗೆ ಬಳಸುತ್ತಿದ್ದ 2 ಕೋವಿಗಳನ್ನು ವಶಕ್ಕೆ ಪಡೆದಿದ್ದಾರೆ.ಒಂಟಿ ನಳಿಕೆ ರೈಫಲ್ ಹಾಗೂ ಐವತ್ತಕ್ಕೂ ಹೆಚ್ಚು ಜೀವಂತ ಬಳಸಿದ ಗುಂಡು ಪತ್ತೆಯಾಗಿವೆ. ವನ್ಯಜೀವಿ ಹಾಗೂ ಅರಣ್ಯ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿ ದಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುದರ್ಶನ್ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್, ವಲಯ ಅರಣ್ಯಾಧಿಕಾರಿ ವೆಂಕಟೇಶ್, ಉಪ ವಲಯ ಅರಣ್ಯಾಧಿಕಾರಿ ಪ್ರಕಾಶ್‌, ಮಾರಪ್ಪ ಪಾಲ್ಗೊಂಡಿದ್ದರು. 19 ಕೆಸಿಕೆಎಂ 4ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಓರ್ವನನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಕೋವಿ ವಶಪಡಿಸಿಕೊಂಡಿರುವುದು.