ಮಡಿಕೇರಿ: ನಗರದ ಎಫ್‌ಎಂಕೆಎಂಸಿ ಕಾಲೇಜು ಹಿಂಭಾಗ ವ್ಯಕ್ತಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಮಿನ್ನಂಡ ರಾಜಪ್ಪ (75) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಮಡಿಕೇರಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋವಿಯನ್ನು ವಶಕ್ಕೆ ಪಡೆಯಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಠಾಣಾಧಿಕಾರಿ ಶ್ರೀಧರ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.