ಸಾರಾಂಶ
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ಕೊಣನೂರು ಹೋಬಳಿ ಕಂಟೇನಹಳ್ಳಿ ಗ್ರಾಮದ ಕೆ.ಡಿ ರವಿ (50) ನೇಣಿಗೆ ಶರಣಾದವರು. ವಿವಿಧ ಸಂಘ ಮೈಕ್ರೋ ಫೈನಾನ್ಸ್‌ನಲ್ಲಿ ಒಟ್ಟು 9 ಲಕ್ಷ ರು. ಸಾಲ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಾಲ ಮರುಪಾವತಿಗೆ ಸಂಘಸಂಸ್ಥೆಗಳ, ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಒತ್ತಡ ಹಾಗೂ ಕಿರುಕುಳ ಹೆಚ್ಚಿದ ಕಾರಣ ಮನೆಯಲ್ಲಿಯೇ ನೇಣು ಬಿಗಿದುಕೊಂಡು ರವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕನ್ನಡಪ್ರಭ ವಾರ್ತೆ ಅರಕಲಗೂಡು
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ಕೊಣನೂರು ಹೋಬಳಿ ಕಂಟೇನಹಳ್ಳಿ ಗ್ರಾಮದ ಕೆ.ಡಿ ರವಿ (50) ನೇಣಿಗೆ ಶರಣಾದವರು.ವಿವಿಧ ಸಂಘ ಮೈಕ್ರೋ ಫೈನಾನ್ಸ್‌ನಲ್ಲಿ ಒಟ್ಟು 9 ಲಕ್ಷ ರು. ಸಾಲ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಾಲ ಮರುಪಾವತಿಗೆ ಸಂಘಸಂಸ್ಥೆಗಳ, ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಒತ್ತಡ ಹಾಗೂ ಕಿರುಕುಳ ಹೆಚ್ಚಿದ ಕಾರಣ ಮನೆಯಲ್ಲಿಯೇ ನೇಣು ಬಿಗಿದುಕೊಂಡು ರವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೊಣನೂರು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ರೈತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಇಟ್ಟಿದ್ದು ಕುಟುಂಬಸ್ಥರು ಹಾಗೂ ಬಂಧು ಬಾಂಧವರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಪತ್ನಿ ಇದ್ದಾರೆ. ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿಗೆ ಅರಕಲಗೂಡು ಪಟ್ಟಣದಲ್ಲಿ ಒಂದೇ ಕುಟುಂಬದ ಮೂವರು ಬಡ್ಡಿ ದಂಧೆ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಅಲ್ಲದೆ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಕುಟುಂಬ ಒಂದಕ್ಕೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿರುವ ವಿರುದ್ಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕ್ಷೇತ್ರದ ಶಾಸಕ ಎ.ಮಂಜು ಅವರು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಕಿರುಕುಳ ನಿಯಂತ್ರಣಕ್ಕೆ ಕಾನೂನು ಅನುಷ್ಠಾನಕ್ಕೆ ಮುಂದಾಗಿದ್ದು , ಯಾರೂ ಕೂಡ ಆತುರದ ನಿರ್ಧಾರದಿಂದ ಪ್ರಾಣ ಕಳೆದುಕೊಳ್ಳುವ ಮಟ್ಟಕ್ಕೆ ಮುಂದಾಗಬಾರದು ಎಂದು ಅವರು ವಿನಂತಿ ಮಾಡಿದರು.