ಸಾರಾಂಶ
ರಾಮನಗರ: ಹಳಿ ದಾಟುವಾಗ ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಚೆನ್ನಮಾನಹಳ್ಳಿ ರೈಲ್ವೆ ಸೇತುವೆ ಬಳಿ ನಡೆದಿದೆ.
ರಾಮನಗರ: ಹಳಿ ದಾಟುವಾಗ ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಚೆನ್ನಮಾನಹಳ್ಳಿ ರೈಲ್ವೆ ಸೇತುವೆ ಬಳಿ ನಡೆದಿದೆ. ತಾಲೂಕಿನ ಚೆನ್ನಮಾನಹಳ್ಳಿ ಗ್ರಾಮದ ಶ್ರೀನಿವಾಸ್ (45) ಮೃತರು. ರೇಷ್ಮೆ ನೂಲಿನ ಕಾರ್ಖಾನೆಯಲ್ಲಿ ರಾತ್ರಿ ಪಾಳಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ಶ್ರೀನಿವಾಸ್ ರೈಲ್ವೆ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.