ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ವ್ಯಕ್ತಿ ಸಾವು

| Published : May 01 2025, 12:47 AM IST

ಸಾರಾಂಶ

ರಸ್ತೆ ದಾಟುತ್ತಿದ್ದಾಗ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಪ್ರವೀಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚನ್ನಪಟ್ಟಣ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಮುದುಗೆರೆ ಗ್ರಾಮದ ಬಳಿಯ ಎಂಪೈರ್ ಹೋಟೆಲ್ ಬಳಿ ಸಂಭವಿಸಿದೆ.ಬೆಂಗಳೂರಿನ ವಡೇರಹಳ್ಳಿಯ ನಿವಾಸಿ ಪ್ರವೀಣ್ ಕುಮಾರ್ (44) ಮೃತ ವ್ಯಕ್ತಿ. ಇವರು ಬೆಂ_ಮೈ ಎಕ್ಸ್‌ಪ್ರೆಸ್ ವೇನಲ್ಲಿ ಮುದುಗೆರೆ ಬಳಿ ಇರುವ ಎಂಪೈರ್ ಹೋಟೆಲ್ ಬಳಿ ಊಟ ಮಾಡಲು ರಸ್ತೆ ದಾಟುತ್ತಿದ್ದಾಗ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಪ್ರವೀಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತ ಪರೀಕ್ಷೆ ನಡೆಸಿದ ಮೃತ ದೇಹವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.