ಮಹಿಳೆಯ ಕೈಕಾಲು ಕಟ್ಟಿ ಚಿನ್ನಾಭರಣ ದೋಚಿ ಪರಾರಿ

| Published : Jun 23 2025, 11:53 PM IST

ಸಾರಾಂಶ

ರಾಮಪುರ ಗ್ರಾಮದ ಜನನಿಬಿಡ ಪ್ರದೇಶದಲ್ಲೇ ಮಹಿಳೆಯ ಕೈಕಾಲು ಕಟ್ಟಿ ಹಾಕಿ ಚಿನ್ನಾಭರಣವನ್ನು ದೋಚಿ ಪರಾರಿಯಾಗಿರುವ ಘಟನೆ ಸೋಮವಾರ ಜರುಗಿದೆ.

ಕನ್ನಡಪ್ರಭ ವಾರ್ತೆ ಹನೂರು

ರಾಮಪುರ ಗ್ರಾಮದ ಜನನಿಬಿಡ ಪ್ರದೇಶದಲ್ಲೇ ಮಹಿಳೆಯ ಕೈಕಾಲು ಕಟ್ಟಿ ಹಾಕಿ ಚಿನ್ನಾಭರಣವನ್ನು ದೋಚಿ ಪರಾರಿಯಾಗಿರುವ ಘಟನೆ ಸೋಮವಾರ ಜರುಗಿದೆ.

ರಾಮಪುರ ಗ್ರಾಮದ ಮಾರಿಗುಡಿ ಬೀದಿಯ ನಿವಾಸಿ ಮಹದೇವಮ್ಮ (55) ಎಂಬುವವರು ಬೆಳಗ್ಗೆ 4 ಗಂಟೆಗೆ ಕಾರ್ಯ ನಿಮಿತ್ತ ಮನೆಯಿಂದ ಹೊರಬಂದ ಸಂದರ್ಭ ವ್ಯಕ್ತಿ ಓರ್ವ ಮಹಿಳೆ ಒಂಟಿ ಇರುವುದನ್ನು ಗಮನಿಸಿ ಆಕೆಯ ಕೈ ಕಾಲುಗಳನ್ನು ಕಟ್ಟಿ ಹಾಕಿ ಬಾಯಿಗೆ ಬಟ್ಟೆ ಕಟ್ಟಿ ನಂತರ ಅವರ ಬಳಿ ಇದ್ದ ಸುಮಾರು 45 ಗ್ರಾಂ ಚಿನ್ನಾಭರಣ ಕಸಿದು ಸ್ಥಳದಿಂದ ಪರಾರಿಯಾಗಿರುವ ಬಗ್ಗೆ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪೊಲೀಸ್ ಠಾಣಾ ಕೇಂದ್ರ ಸ್ಥಾನದಲ್ಲಿ ಘಟನೆ..ಮಹಿಳೆ ಮಾದೇವಮ್ಮನವರ ಕೈಕಾಲುಗಳನ್ನು ಕಟ್ಟಿ ಹಾಕಿರುವ ಬಗ್ಗೆ ಚೀರಾಡುತ್ತಿರುವುದನ್ನು ಗಮನಿಸಿದ ಸುತ್ತಲಿನ ಮನೆಯ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಆಗಮಿಸಿ ರಕ್ಷಿಸಿ ಕೈ ಕಾಲುಗಳನ್ನು ಕಟ್ಟಿ, ಚಿನ್ನಾಭರಣ ದೋಚಿರುವ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ನಾಗರಿಕರಿಂದ ಮಾಹಿತಿ ರವಾನೆ ನೀಡಿದ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ರಾಮಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಈ ಬಗ್ಗೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಘಟನೆಗೆ ಸಂಬಂಧಿಸಿದ ಮಹಿಳೆಯಿಂದ ಸಮಗ್ರ ಮಾಹಿತಿಯನ್ನು ಪಡೆದುಕೊಂಡು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರಕರಣದ ಕಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಘಟನೆಗೆ ಖಂಡನೆ: ಪೊಲೀಸರು ಸೂಕ್ತ ತನಿಖೆ ಕೈಗೊಂಡು ಚಿನ್ನಾಭರಣವನ್ನು ಕಳೆದುಕೊಂಡಿರುವ ಮಹಿಳೆಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಪೊಲೀಸ್ ಇಲಾಖೆಯನ್ನು ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.